Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಜಿತ್ ಪವಾರ್ ನಿಧನಕ್ಕೆ ರಾಜ್ಯದ ನಾಯಕರ ಪ್ರತಿಕ್ರಿಯೆ ಇಲ್ಲಿದೆ

Ajit Pawar
---Advertisement---

ಬೆಂಗಳೂರು: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ವಿಮಾನ ದುರಂತದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಜ್ಯ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಮಾತನ್ನಾಡಿ, ಅಜಿತ್ ಪವಾರ್ ಅವರ ನಿಧನ ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಇಂದು ಬೆಳಗ್ಗೆ ಬಾರಾಮತಿಗೆ ಹೋಗುವಂತಹ ಸಂದರ್ಭದಲ್ಲಿ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಅತ್ಯುತ್ತಮ ಪ್ರಭಾವಿ ರಾಜಕಾರಣಿಯಾಗಿದ್ದವರು. ಸಹಕಾರಿ ಕ್ಷೇತ್ರ ಹಾಗೂ ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದರು. ಅವರ ನಿಧನ ಎಲ್ಲರಿಗೂ ದುಃಖ ತಂದಿದೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಅಪಘಾತ ಹೊಂದಿರುವುದು ಬಹಳ ಆಘಾತಕಾರಿಯಾದಂತ ಸುದ್ದಿ. ಈ ನೋವನ್ನ ತಡೆಯುವಂತ ಶಕ್ತಿಯನ್ನ ಭಗವಂತ ದಯಪಾಲಿಸಲಿ ಎಂದು ಬೇಡಿಕೊಳ್ಳುತ್ತೇನೆ ಎಂದಿದ್ದಾರೆ.

ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬೆಳಗ್ಗೆ ಬೆಳಗ್ಗೆ ಇದು ಶಾಕಿಂಗ್ ನ್ಯೂಸ್. ಹಿರಿಯ ನಾಯಕರು. ಸದಾ ಪಾಸಿಟಿವ್ ಆಗಿ ಆಲೋಚನೆ ಮಾಡ್ತಾ ಇದ್ದರು. ಪಾರ್ಟಿ ಬಿಟ್ಟು ಹೋದಾಗ ಬೇಸರ ಆಗಿತ್ತು. ರಾಜಕೀಯದ ಬೆಳವಣಿಗೆಯ ಉದ್ದೇಶದಿಂದ ಆ ರೀತಿ ಮಾಡಿದ್ದಾರೆ. ಮೊನ್ನೆ ತಾನೇ ಮುಖ್ಯಮಂತ್ರಿಗಳು ಹೇಳ್ತಾ ಇದ್ದರು, ಎಲ್ಲದಕ್ಕೂ ಸಹಕಾರ ಕೊಟ್ಟು ಕೆಲಸ ಮಾಡ್ತಾ ಇದ್ದಾರೆ ಅಂತ. ಒಳ್ಳೆ ಫಲಿತಾಂಶ ಪಡೆದು, ಡಿಸಿಎಂ ಆಗಿದ್ರು. ಆದರೆ ಇಂದು ನಮ್ಮಿಂದ ದೂರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲಿ. ಅವರು ಬೆಂಗಳೂರಿನಲ್ಲೂ ನಂಟಸ್ತ ಬೆಳೆಸಿದ್ದಾರೆ. ನಿನ್ನೆಯಷ್ಟೇ ಅವರ ಬೀಗರನ್ನ ಭೇಟಿ ಮಾಡಿದ್ದೆ. ಇವತ್ತು ದುರಂತ ನಡೆದಿದೆ ಎಂದು ಬೇಸರ ಮಾಡಿಕೊಂಡರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now