ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಸಚಿವರೇ ವಿಧಾನಸಭೆಯಲ್ಲಿ ಕ್ಲಾರಿಟಿಯನ್ನ ನೀಡಿದ್ದಾರೆ. ಬಿಜೆಪಿ ನಾಯಕರಲ್ಲಿ ಈ ಸಂಬಂಧ ಸಾಕಷ್ಟು ಚರ್ಚೆ ನಡೀತಾ ಇತ್ತು. ಕಲಾಪದ ವೇಳೆ ಈ ವಿಚಾರವನ್ನು ಶಾಸಕ ಸುನಿಲ್ ಕುಮಾರ್ ಅವರು ಪ್ರಸ್ತಾಪಿಸಿದರು. ಸಚಿವ ಸ್ಥಾನಕ್ಕೆ ಕೆ.ಜೆ.ಜಾರ್ಜ್ ಅವರು ರಾಜೀನಾಮೆ ನೀಡಿದ್ದಾರೆಂದು ಸುದ್ದಿ ಎಲ್ಲೆಡೆ ಬರ್ತಾ ಇದೆ. ಮುಖ್ಯಮಂತ್ರಿಗಳ ಮಗನ ಹಸ್ತಕ್ಷೇಪ ಹೆಚ್ಚಾಗಿರುವುದರಿಂದ ಬೇಸತ್ತು ಈ ನಿರ್ಧಾರ ತಳೆದಿದ್ದಾರೆ ಎನ್ನಲಾಗ್ತಾ ಇದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು.
ಈ ಬಗ್ಗೆ ಜಾರ್ಜ್ ಅವರೇ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ರಾಜೀನಾಮೆ ನೀಡಿಲ್ಲ ಮತ್ತು ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ. ಅದೆಲ್ಲವೂ ಸತ್ಯಕ್ಕೆ ದೂರವಾದ ಮಾತು. ಬಹುಶಃ ಮಾಧ್ಯಮಗಳೇ ಇಂತಹ ಸುದ್ದಿಯನ್ನು ಸೃಷ್ಟಿ ಮಾಡಿರಬೇಕು. ಮುಖ್ಯಮಂತ್ರಿಗಳ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನಾವು ನಂಬಿಕೆ ಮತ್ತು ವಿಶ್ವಾಸದಿಂದಲೇ ಸಿಎಂ ಜೊತೆಗಿದ್ದೇವೆ. ಹಸ್ತಕ್ಷೇಪದ ಮಾತುಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಮೌನವಾಗುವಂತೆ ಮಾಡಿದರು. ಈ ಸ್ಪಷ್ಟನೆಯೊಂದಿಗೆ ಸದ್ಯಕ್ಕೆ ಜಾರ್ಜ್ ರಾಜೀನಾಮೆ ವದಂತಿಗೆ ತೆರೆ ಬಿದ್ದಂತಾಗಿದ್ದು, ಬಿಜೆಪಿ ನಾಯಕರ ಕುತೂಹಲ ತಣ್ಣಗಾಗಿದೆ ಎಂದು ಕೆ.ಜೆ.ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಇನ್ನು ಇಂದಿನ ಸದನದಲ್ಲೆಲ್ಲಾ ಬರೀ ಕೆ.ಜೆ.ಜಾರ್ಜ್ ಅವರ ರಾಜೀನಾಮೆಯ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಅದರಲ್ಲೂ ಬಿಜೆಪಿ ನಾಯಕರು ಈ ಬಗ್ಗೆ ಮಾತನ್ನಾಡಿದ್ದರು. ಇದೀಗ ಕೆ.ಜೆ.ಜಾರ್ಜ್ ಅವರೇ ಅದಕ್ಕೆ ಸ್ಪಷ್ಟ ಉತ್ತರ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್