Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಬದುಕಿನ ವೈವಿಧ್ಯತೆ ಅರಿತಾಗ ಮಾತ್ರ ಪರಿಪೂರ್ಣ ಶಿಕ್ಷಣ ಸಾಧ್ಯ : ಡಾ. ಟಿ.ಎಸ್. ರವಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ. 29 : ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಹಳ್ಳಿ ಜನರ ಬದುಕಿನ ವೈವಿಧ್ಯತೆ ಹಾಗೂ ಅವರ ಜೀವನ ನಿರ್ವಹಣಾ ಕ್ರಮಗಳನ್ನು ಪ್ರಾಯೋಗಿಕವಾಗಿ ಅರಿತುಕೊಳ್ಳಬೇಕು. ಆಗ ಮಾತ್ರ ಶಿಕ್ಷಣಕ್ಕೆ ಒಂದು ಅರ್ಥ ಸಿಗುತ್ತದೆ ಎಂದು ಎಸ್‌ಆರ್‌ಎಸ್ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ಟಿ.ಎಸ್. ರವಿ ಅಭಿಪ್ರಾಯಪಟ್ಟರು.

 

ಚಿತ್ರದುರ್ಗ ತಾಲ್ಲೂಕಿನ ಅನ್ನೇಹಾಳ್ ಜಂಪಯ್ಯನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಎಸ್‌ಆರ್‌ಎಸ್ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ಎನ್.ಎಸ್.ಎಸ್ ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಂದನ್ ಜಿ.ಪಿ ಮಾತನಾಡಿ, ಈ ವಿಶೇಷ ಶಿಬಿರವು ಕೇವಲ ಜಾಗೃತಿ ಮೂಡಿಸುವ ವೇದಿಕೆಯಲ್ಲ, ಬದಲಾಗಿ ವಿದ್ಯಾರ್ಥಿಗಳ ಆತ್ಮಾವಲೋಕನ ಹಾಗೂ ಹೊಸ ವಿಷಯಗಳ ಕಲಿಕೆಗೆ ಪೂರಕವಾದ ತಾಣವಾಗಿದೆ ಎಂದರು.

 

ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ದೇವೇಂದ್ರಪ್ಪ ಕೆ. ಕುಂಚಿಗನಾಳ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿ ಜೀವನದ ಅಮೂಲ್ಯ ಕ್ಷಣಗಳಲ್ಲಿ ಈ ಶಿಬಿರವೂ ಒಂದು. ಇಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಅದ್ಭುತ ಸಾಧನೆಯ ಹಾದಿಯಲ್ಲಿ ಸಾಗಬೇಕು  ಎಂದು ಶಿಬಿರಾರ್ಥಿಗಳನ್ನು ಹುರಿದುಂಬಿಸಿದರು.

ಎನ್ ಎಸ್ ಎಸ್ ವಿಶೇಷ ವಾರ್ಷಿಕ ಶಿಬಿರವು ಜ.28 ರಿಂದ ಪ್ರಾರಂಭವಾಗಿದ್ದು, ಫೆ.03 ರವರೆಗೆ ನಡೆಯಲಿದೆ.  ಈ ಶಿಬಿರದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಗ್ರಾಮದ ಸ್ವಚ್ಛತೆ, ಜನಜಾಗೃತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಕಾರ್ಯಕ್ರಮದಲ್ಲಿ ಕೆಪಿಎಸ್ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಕೆ. ಜಂಪಣ್ಣ, ಶಿಕ್ಷಕ ರಂಗಸ್ವಾಮಿ ಹಾಗೂ ಕಾಲೇಜಿನ ಉಪನ್ಯಾಸಕರುಗಳಾದ ಪ್ರೊ. ಮಾಧುರಿ, ಪ್ರೊ. ನಾಗರಾಜ್,  ಪ್ರೊ. ಕಲ್ಲಪ್ಪ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...