ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಚಿತ್ರದುರ್ಗ ನಗರದಲ್ಲಿ ನಾಮಫಲಕ ಜಾಗೃತಿ ಆಂದೋಲನ ಮತ್ತು ಸಾರ್ವಜನಿಕರಿಗೆ ಸಮ್ಮೇಳನಕ್ಕೆ ಆಹ್ವಾನ ನೀಡುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆಬ್ರವರಿ 17 ಮತ್ತು 18 ರಂದು ಚಿತ್ರದುರ್ಗ ನಗರದಲ್ಲಿ 18 ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿನ ಅಂಗಡಿ,ಮುಂಗಟ್ಟುಗಳು ಸೇರಿದಂತೆ ಸಾರ್ವಜನಿಕರಿಗೆ ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು. ಸಮ್ಮೇಳನ ಜರುಗುವ ನಗರದಲ್ಲಿ ಕನ್ನಡದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಅಂಗಡಿ,ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ತಿಳಿಸಲಾಯಿತು. ಕೆಲವು ಅಂಗಡಿ,ಮುಂಗಟ್ಟುಗಳ ಮಾಲೀಕರು ಸಂಪೂರ್ಣವಾಗಿ ಕನ್ನಡವನ್ನು ಮಾತ್ರ ಬಳಸುತ್ತೇವೆ ಎಂದು ಹೇಳಿದರು.
ಸ್ಟಾರ್ ಒನ್ ಎಲೆಕ್ಟ್ರಾನಿಕ್ಸ್ ಮಾಲೀಕರು ಮಾತನಾಡಿ, ಕರ್ನಾಟದಲ್ಲಿರುವ ನಾವುಗಳು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ಕನ್ನಡವನ್ನು ನಾವು ಬಳಸಬೇಕು ಹೊರತು ಉಳಿದ ರಾಜ್ಯಗಳು ಬಳಸುವುದು ಸಾಧ್ಯವಿಲ್ಲ. ಯಾವುದೇ ರಾಜ್ಯದಿಂದ ಇಲ್ಲಿಗೆ ಬಂದಿರಲಿ, ಅವರು ಕನ್ನಡವನ್ನು ಮಾತನಾಡುವುದನ್ನು ಕಡ್ಡಾಯವಾಗಿ ಕಲಿಯಬೇಕು ಎಂದರು.
ಪೌರಕಾರ್ಮಿಕರ, ಬೀದಿಬದಿ ವ್ಯಾಪಾರಿಗಳು, ಗೃಹಿಣಿಯರು, ಅಂಗಡಿಮುಂಗಟ್ಟುಗಳ ಮಾಲೀಕರಿಗೆ ಮನವಿ ಪತ್ರ ಮತ್ತು ಗುಲಾಬಿ ನೀಡಿ ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು. ನಾಮಫಲಕದ ಬಗ್ಗೆ ಜಾಗೃತಿ ನಡೆಸಲಾಯಿತು. ಕನಕ ವೃತ್ತದಿಂದ ಆರಂಭಗೊಂಡು ಪಿಬಿ ರಸ್ತೆ, ಗಾಂಧಿ ವೃತ್ತದ ವರಗಿನ ಅಂಗಡಿ,ಮುಂಗಟ್ಟುಗಳಿಗೆ ಮನವಿ ಪತ್ರ ನೀಡಲಾಯಿತು. ಮುಂದಿನ ದಿನಗಳಲ್ಲಿ ನಗರದ ಎಲ್ಲ ಪ್ರದೇಶಗಳಿಗೆ ಮನವಿ ಪತ್ರವನ್ನು ತಲುಪಿಸಲಾಗುವುದು ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ವಿ.ಎಲ್.ಪ್ರಶಾಂತ್ ತಿಳಿಸಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ, ತಾಲ್ಲೂಕು ಅಧ್ಯಕ್ಷ ವಿ.ಎಲ್.ಪ್ರಶಾಂತ್, ಜಿಲ್ಲಾ ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ, ಆನಂದ್ಕುಮಾರ್,ಗಿರೀಶ್ ನಾಯ್ಕ ಮತ್ತಿತರರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್