Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಫೆ. 07 ರಂದು ಹಿಂದೂ ಸಂಗಮ ಕಾರ್ಯಕ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 01 : ನಗರದ ಹಲವಡೆಗಳಲ್ಲಿ ಹಿಂದೂ ಸಮಾಜದ ಸಂಘಟನೆ ಸ್ವಾವಲಂಬಿ ಸಂಸ್ಕಾರಯುಕ್ತ ಮತ್ತು ಸಾಮರಸ್ಯಯುಕ್ತ ಸಮಾಜವನ್ನು ನಿರ್ಮಾಣ ಮಾಡುವ ಕಾರ್ಯದಲ್ಲಿ ನಿರತವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷಗಳು ತುಂಬಿರುವ ಸಂದರ್ಭದಲ್ಲಿ ಹಿಂದೂ ಸಮಾಜವೇ ಒಟ್ಟುಗೂಡಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ನಗರಗಳಲ್ಲಿ ವಸತಿ ಮಟ್ಟದಲ್ಲಿ ಆಯೋಜಿಸುತ್ತಿದೆ. ಈ ಹಿನ್ನಲೆಯಲ್ಲಿ ಫೆ. 7ರ ಶನಿವಾರ ಹೊಳಲ್ಕೆರೆ ರಸ್ತೆಯ ಧವಳಗಿರಿ ಬಡಾವಣೆಯಲ್ಲಿನ ಕೋಟೆ ಪೋಲಿಸ್ ಠಾಣೆಯ ಆವರಣದಲ್ಲಿ ನಡೆಯಲಿರುವ ಹಿಂದೂ ಸಂಗಮ ಆಯೋಜನ ಸಮಿತಿ ಅಯೋಜಿಸಿರುವ ಹಿಂದೂ ಸಂಗಮ ಕಾರ್ಯಕ್ರಮದ ಅಂಗವಾಗಿ ಭಾನುವಾರ ಗೋ ಪೂಜೆ ಹಾಗೂ ಧ್ವಜ ಕಂಬದ ಪೂಜೆಯನ್ನು ನಡೆಸಲಾಯಿತು.

 

ಫೆ. 7ರಂದು ನಡೆಯಲಿರುವ ಹಿಂದೂ ಸಂಗಮದಲ್ಲಿ ಚಿತ್ರದುರ್ಗ ನಗರಸಭೆಯ 9,10,11,12,13, ವಾರ್ಡ್ ನವರು ಭಾಗವಹಿಸಲಿದ್ದಾರೆ. ಅಂದು ಶೋಭಾಯಾತ್ರೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಸ್.ಜೆ.ಎಂ.ಮಠದ ಶ್ರೀ ಬಸವಪ್ರಭು ಶ್ರೀಗಳು ದಿವ್ಯ ಸಾನಿಧ್ಯವಹಿಸಲಿದ್ದು, ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಂಘಟನಾ ಮಂತ್ರಿ ಪ್ರಶಾಂತ ಭಾಗವಹಿಸಲಿದ್ದಾರೆ.

 

ಇಂದು ನಡೆದ ಗೋ ಪೂಜೆ ಹಾಗೂ ಧ್ವಜ ಕಂಬದ ಪೂಜಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಮುಖಂಡರಾದ ಡಾ.ಸಿದ್ದಾರ್ಥ್ ಗುಂಡಾರ್ಪಿ, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಯುವ ಮೋರ್ಚಾ ಅಧ್ಯಕ್ಷ ವಸಂತಚಾರ್, ಕವನ ರೇಖಾ ವಸಂತ ಸೇರಿದಂತೆ ಬಡಾವಣೆಯ ಜನತೆ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...