ಚಿತ್ರದುರ್ಗ | ಶಿಕ್ಷಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

0 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 03 : ತಾಲ್ಲೂಕಿನ ಭರಮಸಾಗರದ ಖಾಸಗಿ ಶಾಲಾ ಶಿಕ್ಷಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.

ಪ್ರತಿಷ್ಠಿತ ಮಠವೊಂದಕ್ಕೆ ಸೇರಿದ ಖಾಸಗಿ ಶಾಲೆಯಲ್ಲಿ ಶಿಕ್ಷಕನೊಬ್ಬ 6 ವಿದ್ಯಾರ್ಥಿನಿಯರ ಮೇಲೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಸಮಿತಿಯೇ ಶಿಕ್ಷಕನ ವಿರುದ್ಧ ಭರಮಸಾಗರ ಠಾಣೆಗೆ ದೂರು ನೀಡಿದೆ.

ಆರೋಪಿ ಶಿಕ್ಷಕ ರಂಗಣ್ಣನನ್ನು ವಶಕ್ಕೆ ಪಡೆದ ಪೊಲೀಸರು
ಭರಮಸಾಗರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share This Article
Enable Notifications OK No thanks