Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ : ಮಧ್ಯವರ್ತಿಗಳ ಬಗ್ಗೆ ಎಚ್ಚರ

---Advertisement---

ಚಿತ್ರದುರ್ಗ. ಫೆ.3: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು 18 ಡಿಸೆಂಬರ್ 2025 ರಂದು ಅಧಿಸೂಚನೆ ಹೊರಡಿಸಲಾಗಿದೆ.

 

ಆದರೆ, ಕೆಲವು ಮಧ್ಯವರ್ತಿಗಳು ಇದರ ದುರುಪಯೋಗ ಪಡೆದುಕೊಂಡು ಶುಶ್ರೂಷಾಧಿಕಾರಿಗಳ ಉದ್ಯೋಗ ಕೊಡಿಸುವುದಾಗಿ ಸಾರ್ವಜನಿಕರಿಗೆ ಆಮಿಷವೊಡ್ಡಿ ಹಣದ ಬೇಡಿಕೆಯಿಡುತ್ತಿರುವುದು ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ಬಂದಿದೆ. ಸಂಸ್ಥೆಯಲ್ಲಿ ಪಾರದರ್ಶಕ ಹಾಗೂ ನಿಯಮಾನುಸಾರವೇ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಉದ್ಯೋಗ ಕೊಡಿಸುವುದಾಗಿ ನಂಬಿಸುವ ಮಧ್ಯವರ್ತಿಗಳಿಗೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಹಣ ನೀಡಿ ಮೋಸ ಹೋಗಬಾರದು. ಕೆಲಸ ಕೊಡಿಸುವ ಆಮಿಷವೊಡ್ಡಿ ಯಾರಾದರೂ ಹಣ ಕೇಳಿದರೆ, ಅವರ ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ತಕ್ಷಣವೇ ಸಂಸ್ಥೆಯ ಗಮನಕ್ಕೆ ತರುವಂತೆ ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಬಿ.ವೈ.ಯುವರಾಜರಾಜ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now