Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಇಂದೂ ಪ್ರಧಾನಿ ಭಾಷಣ ರದ್ದು: ಮತ್ತೆ  ಮರುಕಳಿಸಿದ ಘಟನೆ 

---Advertisement---

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವನ್ನು ಪ್ರಧಾನಿಯವರ ಉತ್ತರವಿಲ್ಲದೆ ಅಂಗೀಕರಿಸಲಾಯಿತು. ಮೊದಲು, ಜೂನ್ 2004 ರಲ್ಲಿ, ಆಗಿನ ಪ್ರಧಾನಿ ಮನಮೋಹನ್ ಇದ್ದಾಗಲೂ ಹೀಗೆ ಆಗಿತ್ತು.  2004 ರ ನಂತರ ರಾಷ್ಟ್ರಪತಿಗಳ ಭಾಷಣವನ್ನು ಪ್ರಧಾನಿಯವರ ಭಾಷಣವಿಲ್ಲದೆ ಅಂಗೀಕರಿಸಿದ್ದು ಇದೇ ಮೊದಲು.

2004ರ ನಂತರ ಸದನವು ಸಂಪ್ರದಾಯವನ್ನು ಮುರಿದು ಪ್ರಧಾನ ಮಂತ್ರಿಯವರ ಪ್ರತಿಕ್ರಿಯೆಯಿಲ್ಲದೆ ನಿರ್ಣಯವನ್ನು ಅಂಗೀಕರಿಸಿದೆ. ನಿನ್ನೆ ಮುಂದುಡಲ್ಪಟ್ಟ ಲೋಕಸಭಾ ಕಲಾಪ ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರಾರಂಭಿಸಲಾಯಿತು. ಸಂಸದರು ಪ್ರಧಾನಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು, ಇದರಿಂದಾಗಿ ಸದನವನ್ನು ಮತ್ತೆ ಮುಂದೂಡಬೇಕಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭಾಷಣದ ಕುರಿತು ಉತ್ತರ ನೀಡಬೇಕಿದ್ದರೂ, ಪದೇ ಪದೇ ಕಲಾಪದಲ್ಲಿನ ಗದ್ದಲದ ಹಿನ್ನೆಲೆ ಅದಕ್ಕೆ ಅವಕಾಶ ಸಿಗಲಿಲ್ಲ. ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವುದಿಲ್ಲ, ವಿಪಕ್ಷ ನಾಯಕ ಮಾತನಾಡುತ್ತೇನೆ ಎಂದರೆ ಮಾತನಾಡಲು ಬಿಡುವುದಿಲ್ಲ. ಸರ್ಕಾರದ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಚಾರ ಎಂದರು.ಆದಾಗ್ಯೂ, ಸಂಜೆ 5 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ವರದಿಗಳು ತಿಳಿಸುತ್ತಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now