ರಾಜ್ಯ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಎರಡೂವರೆ ವರ್ಷದ ಬಳಿಕ ಮತ್ತೆ
ಮಾಡಲಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಪೊಲೀಸ್ ಉಪ ಮಹಾ ನಿರ್ದೇಶಕರಾಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಚನ್ನಣ್ಣನವರನ್ನು 2023 ರಲ್ಲಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಕೆಲ ಸಮಯದ ಬಳಿಕ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ ನಿಯೋಜಿಸಲಾಗಿತ್ತು. ಸದ್ಯ ಎರಡೂವರೆ ವರ್ಷದ ಬಳಿಕ ಮತ್ತೆ ವರ್ಗಾವಣೆ ಮಾಡಲಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ.

