ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆ ಕಾರ್ಯ ಮುಗಿದಿದ್ದು, ಮತ್ತೆ ಕಾಂಗ್ರೆಸ್ ಹಾಲಿ ಶಾಸಕ ನಂಜೇಗೌಡ ಅವರೇ ಮೇಲುಗೈ ಸಾಧಿಸಿದ್ದಾರೆ. ಮರುಎಣಿಕೆ ನಡೆಸಿದ ಅಧಿಕಾರಿಗಳು ಅದರ ಫಲಿತಾಂಶದ ವರದಿಯನ್ನ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆ ಮಾಡಲಾಗಿತ್ತು. ಇದೀಗ ಆ ಮಾಹಿತಿಯೂ ಬಹಿರಂಗಗೊಂಡಿದ್ದು, ಮರು ಮತ ಎಣಿಕೆಯಲ್ಲೂ ಹಾಲಿ ಶಾಸಕರೇ ಮುಂದಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ನ ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707 ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. 2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ವಿರುದ್ಧ ಕಾಂಗ್ರೆಸ್ ನ ಕೆ.ವೈ.ನಂಜೇಗೌಡ 248 ಮತಗಳ ಅಂತರದಲ್ಲಿ ಗೆದ್ದಿದ್ದರು. ಆದರೆ ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಮಂಜುನಾಥ್ ಗೌಡ ಆರೋಪಿಸಿದ್ದರು. ನಂಜೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದರು.
ಆ ಬಳಿಕ ಕೋರ್ಟ್ ಸೂಚನೆಯಂತೆ ಕೋಲಾರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ನವೆಂಬರ್ 11ರಂದು ಒಟ್ಟು 18 ಸುತ್ತು ಮರುಮತ ಎಣಿಕೆ ಕಾರ್ಯ ನಡೆದಿತ್ತು. ಬಳಿಕ ಫಲಿತಾಂಶವನ್ನು ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಆದರೆ ಮಾಜಿ ಶಾಸಕ ಮಂಜುನಾಥಗೌಡ ಮರು ಎಣಿಕೆಯ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದರು. ಇನ್ನೂ ಕೆಲವೊಂದು ಪ್ರಶ್ನೆಗಳಿಗೆ ನನಗೆ ಉತ್ತರ ಸಿಕ್ಕಿಲ್ಲ. ಅಧಿಕಾರಿಗಳ ಪ್ರೊಸಿಜರ್ ಲ್ಯಾಪ್ಸ್ ಇದೆ. ಸಂಪೂರ್ಣ ವಿವಿ ಪ್ಯಾಟ್ ಗಳನ್ನು ಎಣಿಸಬೇಕಿತ್ತು. ಇದೀಗ ಹಾಲಿ ಶಾಸಕರೇ ಮುಂದುವರೆಯುತ್ತಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.











