Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಳ್ಳಕೆರೆ | ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವಿರೋಧ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 07 : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯು ನಗರದ ಪ್ರವಾಸಿ ಮಂದಿರದಲ್ಲಿ ನಡೆಯಿತು.

 

ಈ ವೇಳೆ ನಡೆದ ಚುನಾವಣೆಯಲ್ಲಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಎಂ.ಜೆ., ಉಪಾಧ್ಯಕ್ಷರಾಗಿ ಸುರೇಶಬೆಳಗೆರೆ ಹಾಗೂ ಎಲ್ಲಾ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿನಾಯಕ ಬಿ.ಎಸ್., ಪ್ರಧಾನ ಕಾರ್ಯದರ್ಶಿ ವೀರೇಶ್ ವಿ. ಅಪ್ಪು ಹಾಗೂ ರಾಜ್ಯ ಸಮಿತಿ ಸದಸ್ಯ ಸಿದ್ದರಾಜು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಂಘದ ಗೌರವ ಅಧ್ಯಕ್ಷರಾಗಿ ನಾಗಭೂಷಣ್ ರಾಗಿ, ಉಪಾಧ್ಯಕ್ಷರಾಗಿ ಸುರೇಶ ಬೆಳಗೆರೆ ಮತ್ತು ರಾಜು ಎಸ್., ಕಾರ್ಯದರ್ಶಿಯಾಗಿ ಲಕ್ಷ್ಮಣ್ ಪಾಳೇಗಾರ, ಖಜಾಂಚಿಯಾಗಿ ರಾಮಾಂಜಿನಿ ಅವರು ಆಯ್ಕೆಯಾಗಿದ್ದಾರೆ. ಇದೇ ವೇಳೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪತ್ರಕರ್ತರಾದ ಭಾರತಿ ಚಿತ್ತಯ್ಯ, ಧನಂಜಯ ವಿ., ದುರ್ಗೆಶ, ಸಿ.ವೈ. ಗಂಗಾಧರ, ಬೊಮ್ಮಲಿಂಗಪ್ಪ ಹಾಗೂ ಶಿವಮೂರ್ತಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಘೋಷಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಿ.ಪಿ. ಮಾರುತಿ, ಕಾರ್ಯದರ್ಶಿ ವಿ. ಚಂದ್ರಪ್ಪ, ಚಳ್ಳಕೆರೆ ತಾಲ್ಲೂಕು ಸಂಘದ ನಿರ್ಗಮಿತ ಅಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಟಿ.ಜೆ. ತಿಪ್ಪೇಸ್ವಾಮಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ರವಿ ಮಲ್ಲಾಪುರ, ಜಿ.ಒ.ಎನ್. ಮೂರ್ತಿ, ಪ್ರಸನ್ನ, ಚೌಳೂರು ಮಂಜುನಾಥ್ ಸೇರಿದಂತೆ ತಾಲ್ಲೂಕಿನ ಹಲವು ಪತ್ರಕರ್ತರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು.

Join WhatsApp

Join Now

Join Telegram

Join Now