Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಡ್ಯಕ್ಕೆ ಬಂಪರ್ ಗಿಫ್ಟ್ ಕೊಟ್ಟ ಕುಮಾರಸ್ವಾಮಿ

---Advertisement---

ಮೈಸೂರು: ಕೇಂದ್ರ ಸಚಿವ ಕುಮಾರಸ್ವಾಮಿ ಇದೀಗ ಮಂಡ್ಯ ಜಿಲ್ಲೆಯ ಜನರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಮಂಡ್ಯದಲ್ಲಿ ಆಟೋ ಮೊಬೈಲ್ ಇಂಡಸ್ಟ್ರಿ ತೆರೆಯಲು ಘೋಷಣೆ ಮಾಡಿದ್ದಾರೆ. ಕೇಂದ್ರದ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಲಘುವಾಗಿ ಮಾತನ್ನಾಡಿದ್ದಾರೆ. 16 ಬಜೆಟ್ ಮಂಡಿಸಿರುವ ಅವರಿಗೆ ಕೇಂದ್ರದ ದೂರದೃಷ್ಟಿಯ ಬಜೆಟ್ ಅರ್ಥವಾಗಿಲ್ಲ. ಅವರು ಸಂಕುಚಿತ ಭಾವನೆ ತೋರಿದ್ದಾರೆ ಎಂದು ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಖಾಲಿ ಚಂಬಿನ ಕ್ರೆಡಿಟ್ ರಾಜ್ಯ ಸರ್ಕಾರಕ್ಕೆ ಹೋಗಬೇಕು. ಯಾಕಂದ್ರೆ ಕಳೆದ ಎರಡು ವರ್ಷಗಳಿಂದ ರಾಜ್ಯ ಸರ್ಕಾರ ಜನರಿಗೆ ಖಾಲಿ ಚಂಬನ್ನೆ ಕೊಡುತ್ತಿದೆ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಕುಮಾರಸ್ವಾಮಿ ಮಂಡ್ಯಕ್ಕೆ ಹಾಗೂ ರಾಜ್ಯಕ್ಕೆ ಏನು ತಂದಿದ್ದಾರೆ. ಕಾಂಗ್ರೆಸ್ ನಾಯಕರು ಸಣ್ಣತನದ ಪ್ರಶ್ನೆಗಳನ್ನೇ ಕೇಳುತ್ತಿದ್ದಾರೆ. ಅವರ ಪ್ರಶ್ನೆಗೆ ಈಗ ನನ್ನ ಕೆಲಸವರೆ ಉತ್ತರವಾಗಿದೆ.

ಕೇಂದ್ರ ಸರ್ಕಾರ ನನಗರ ಮಹತ್ವದ ಜವಬ್ದಾರಿ ನೀಡಿದೆ. ಇದರ ಅನ್ವಯ ರಾಜ್ಯದಲ್ಲಿ ಆಟೋ ಮೊಬೈಲ್ ರಿಸರ್ಚ್ ಆಫ್ ಇಂಡಿಯಾ ಟೆಸ್ಟಿಂಗ್ ಸೆಂಟರ್ ತರಲು ಮುಂದಾಗಿದ್ದೇವೆ. ಈ ಘಟನಕವನ್ನು ಮಂಡ್ಯದಲ್ಲಿಯೇ ಸ್ಥಾಪಿಸಲು ನಿರ್ಧರಿಸಲಾಗಿದೆ. ಮಂಡ್ಯದಲ್ಲಿಯೇ ಈ ಆಟೋ ಆಟೋಮೊಬೈಲ್ ಸೆಂಟರ್ ನಿರ್ಮಾಣವಾಗಬೇಕು. ಇದಕ್ಕಾಗಿ ಮಂಡ್ಯದಲ್ಲೇ 100 ಎಕರೆ ಜಾಗವನ್ನು ನೀಡುವಂತೆ ಕೋರಿ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ನಾನು ನಾಟಕವಾಡಲು ಪತ್ರ ಬರೆದಿಲ್ಲ. ಪ್ರಧಾನಿಗಳು ನನಗೆ ಮಂತ್ರಿ ಸ್ಥಾನ ಕೊಟ್ಟಿರುವುದು ನಾಟಕವಾಡಲಲ್ಲ. ರಾಜ್ಯದ ಕೈಗಾರಿಕಾ ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ‌. ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂಬ ಮಾತನ್ನ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now