ಬೆಂಗಳೂರು: ಇತ್ತೀಚೆಗೆ ರಾಜ್ಯದ ನಾನಾ ಭಾಗಗಳಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಹಾಕಿದ್ದಂತ ತಂಬಾಕು ಜಾಹೀರಾತನ್ನು ಜನ ಹರಿದು ಬಿಸಾಡುತ್ತಿದ್ದರು. ಇದೀಗ ಆ ರೀತಿ ಇನ್ಮುಂದೆ ಹರಿದು ಬಿಸಾಡಿದರೆ ಅಂತವರ ವಿರುದ್ಧ ಎಫ್ಐಆರ್ ದಾಖಲಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಸಾರಿಗೆ ಬಸ್ ಗಳ ಹೊರ ಭಾಗದಲ್ಲಿ ಅಳವಡಿಸಿದ್ದ ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧಿಸಿದ್ದ ಸರ್ಕಾರ ತೆರವಿಗೆ ಎರಡು ವಾರಗಳ ಗಡುವು ನೀಡಿತ್ತು. ಇದೀಗ ನಿಯಮಗಳನ್ವಯ ಜಾಹೀರಾತು ಅಳವಡಿಕೆಯು ಸಾರಿಗೇತರ ಆದಾಯ ಮೂಲವಾಗಿದೆ. ಬಸ್ಸುಗಳಲ್ಲಿನ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
ಬಸ್ಸುಗಳಲ್ಲಿನ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಮೂಲಕ ಸರ್ಕಾರ ಉಲ್ಟಾ ಹೊಡೀತಾ ಎಂಬ ಅನುಮಾನವೂ ವ್ಯಕ್ತವಾಗಿದೆ. ಇತ್ತೀಚೆಗೆ ಬಸ್ ಗಳ ಮೇಲೆ ಅಳವಡಿಸಿದ್ದ ಸಿಗರೇಟ್, ಪಾನ್ ಮಸಲಾ ಹಾಗೂ ಇತರ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಸಾರ್ವಜನಿಕರು, ಕನ್ನಡ ಪರ ಸಂಘಟನೆಗಳು ತೆರವು ಮಾಡಿದ್ದವು. ಸಾಮಾಜಿಕ ಜಾಲತಾಣಗಳಲ್ಲಿ ಒಂದು ರೀತಿಯ ಅಭಿಯಾನ ಆರಂಭವಾಗಿತ್ತು. ಅದರ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಸ್ ಗಳ ಮೇಲೆ ಜಾಹೀರಾತು ಅಳವಡಿಕೆ ನಿರ್ಬಂಧಿಸಿ ಆದೇಶಿಸಿದ್ದರು. ಆ ಜಾಹೀರಾತುಗಳ ತೆರವಿಗೆ ಫೆಬ್ರವರಿ 18ರವರೆಗೆ ಗಡುವು ನೀಡಲಾಗಿತ್ತು. ಇದು ಸಾರ್ವಜನಿಕರ ಆಕ್ರೋಶಕ್ಕೆ ಸಿಕ್ಕ ಜಯ ಎಂದು ಬಣ್ಣಿಸಲಾಗಿತ್ತು. ಆದರೆ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೀಡಿರುವ ಟಿಪ್ಪಣಿಯಲ್ಲಿ ಬಸ್ಸುಗಳಲ್ಲಿನ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಸಿದನ್ನು ಅಪರಾಧ ಎಂದಿದೆ. ಅವರ ಬಗ್ಗೆ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











