Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಲ್ಮೀಕಿ ಜನಾಂಗದವರಿಗೆ ಸಚಿವ ಸ್ಥಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಹರಿಹರ : ಫೆಬ್ರವರಿ – 09 : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೆಟ್ರೋ ದರ ಹೆಚ್ಚಳ: ಸರ್ಕಾರದ ಪಾತ್ರವಿಲ್ಲ :
ಮೆಟ್ರೋ ದರ ಹೆಚ್ಚಳವಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮೆಟ್ರೋ ದರವನ್ನು ಕೇಂದ್ರ ಸರ್ಕಾರದಿಂದ ನೇಮಕವಾಗಿರುವ ಮೆಟ್ರೋ ಅಧ್ಯಕ್ಷರು ನಿಗದಿ ಮಾಡುತ್ತಾರೆ.‌ ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದರು. ಮೆಟ್ರೋ ದರದ ಬಗ್ಗೆ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಅವರನ್ನೇ ಕೇಳಬೇಕು ಎಂದರು.

ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ : ಭಾರತ ಮತ್ತು ಅಮೆರಿಕ ನಡುವೆ ಆಗಿರುವ ಒಪ್ಪಂದದಿಂದ ರೈತರಿಗೆ ಅನ್ಯಾಯವಾಗುತ್ತದೆ. ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ ಎಂದರು.

ಇನ್ನೆರಡು ಸಚಿವ ಸ್ಥಾನ: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಗಣನೆ ವಾಲ್ಮೀಕಿ ಜನಾಂಗದವರಿಗೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಾವು ಸಚಿವರನ್ನು ತೆಗೆದುಹಾಕಿಲ್ಲ. ಕಾರಣಾಂತರದಿಂದ ರಾಜೀನಾಮೆ ಕೊಡುವ ಪರಿಸ್ಥಿತಿ ಬಂತು. ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಪರಿಗಣಿಸಲಾಗುವುದು ಎಂದರು.

ಸಚಿವ ಎಸ್.ಎಸ್.ಮಲ್ಲಿಕಾರ್ಜುನ ರಾಜೀನಾಮೆ: ಸತ್ಯಕ್ಕೆ ದೂರವಾದ ಸಂಗತಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವರು ರಾಜಿನಾಮೆ ಸಲ್ಲಿಸಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.

ಬಜೆಟ್ ಮಂಡನೆ ದಿನಾಂಕ ; ಶೀಘ್ರ ಘೋಷಣೆ
ರಾಜ್ಯ ಬಜೆಟ್ ಗೆ ಸಂಬಂಧಿಸಿದಂತೆ ತಯಾರಿ ನಡೆಯುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now