Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ ಗ್ರಾಮದ ಜಾತ್ರೆಯಲ್ಲಿ ಹೊಸ ನಿಯಮ: ಡಂಗುರ ಸಾರಿ ಎಚ್ಚರ 

---Advertisement---

ಮೈಸೂರಿನ ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್ರಾಮ ದೇವತೆ ಜಾತ್ರೆ ಹಿನ್ನೆಲೆ ಗ್ರಾಮಸ್ಥರು ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಗ್ರಾಮಸ್ಥರು ಜನರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಡಂಗುರ ಸಾರಿ ವಾರ್ನಿಂಗ್ ಕೊಟ್ಟಿದ್ದಾರೆ‌. ಜಾತ್ರೆ ಶಾಂತಿಯುತವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ಕೈಗೊಳ್ಳಲಾಗಿದೆ.

ಜಾತ್ರೆಯ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ವಹಿಸಿ ಈಗಾಗಲೇ ಡಂಗೂರ ಹೊಡೆಸಿದ್ದಾರೆ. ಜಾತ್ರೆಗೆ ಬರುವ ಹೆಣ್ಣುಮಕ್ಕಳ  ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಕುಡಿದು ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಲಾಗಿದೆ.ಮಹಿಳೆಯರು ಹಾಗೂ ಯುವತಿಯರ ವಿಡಿಯೋ ತೆಗೆದರೆ ಅಥವಾ ಕುಡಿದು ಗಲಾಟೆ ಮಾಡಿದರೆ 30 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಡಂಗುರ ಸಾರಿಸಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಜಾತ್ರೆ ಸುವ್ಯವಸ್ಥಿತವಾಗಿ ನಡೆಯಬೇಕು ಎಂದು ಗ್ರಾಮದಲ್ಲಿ ಡಂಗುರ ಬಾರಿಸಿ ಜಾಗೃತಿ ಮೂಡಿಸಲಾಗಿದೆ. ತಮಟೆ ಬಾರಿಸಿ ಗ್ರಾಮದಲ್ಲಿ ಈ ನಿಯಮಗಳನ್ನು ಹೇಳಲಾಗಿದ್ದು, ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಡಂಗುರ ಸಾರಿರೋ ವಿಡಿಯೋ ವೈರಲ್ ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now