Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ವಜಾ..!

---Advertisement---

ಬೆಂಗಳೂರು: ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನ ಭೀತಿಯಿಂದ ಇದ್ದಾರೆ. ರೌಡಿಶೀಟರ್ ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ಹೀಗಾಗಿಯೇ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಆ ಅರ್ಜಿ ವಜಾಗೊಂಡಿದೆ. ಈ ಮೂಲಕ ಸಿಐಡಿ ಪೊಲೀಸರಿಗೆ ಭೈರತಿ ಬಸವರಾಜು ಬಂಧಿಸುವ ಹಾದಿ ಸುಗಮವಾಗಿದೆ. ಈ ಹಿಂದೆ ಕೆಳ ನ್ಯಾಯಾಲಯದಲ್ಲಿ ಭೈರತಿ ಬಸವರಾಜು ಅವರ ನಿರೀಕ್ಷಣಾ‌ ಜಾಮೀನು ಅರ್ಜಿ ವಜಾಗೊಂಡಿತ್ತು.

ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆ ಭೈರತಿ ಬಸವರಾಜ್ ನಾಪತ್ತೆಯಾಗಿದ್ದಾರೆ. ಮೊಬೈಲ್ ಸಿಚ್ಡ್ ಆಫ್ ಮಾಡಿಕೊಂಡಿದ್ದಾರೆ. ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ. ಹೀಗಾಗಿ ಶಾಸಕ ಭೈರತಿ ಬಸವರಾಜುರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು. ಆಗ ಸತ್ಯ ಹೊರಗೆ ಬರಲಿದೆ ಎಂದು ಸಿಐಡಿ ಪರ ವಕೀಲರು ಹೈಕೋರ್ಟ್ ನಲ್ಲಿ ವಾದಿಸಿದ್ದರು.

ಅವರಿಗೆ ನಿರೀಕ್ಷಣಾ ಜಾಮೀನು ಸಿಗಬಾರದೆಂದು ಸಿಐಡಿ ಪರ ವಕೀಲರು ವಾದ ಮಂಡನೆ ಮಾಡಿದ್ದರು. ಇತ್ತ ಬಿಕ್ಲು ಶಿವಮ ತಾಯಿ ಕೂಡ ಕೇವಲ 24 ಗಂಟೆಯಲ್ಲಿಯೇ ತಮ್ಮ ಹೇಳಿಕೆಯನ್ನ ಬದಲಾಯಿಸಿದ್ದಾರೆ. ಪೊಲೀಸರಿಗೆ ಕೊಟ್ಟ ದೂರುಗಳಲ್ಲಿ ಕೆಲ ವ್ಯತ್ಯಾಸಗಳು ಇದಾವೆ. ಹೀಗಾಗಿ ಭೈರತಿ ಬಸವರಾಜು ಅವರನ್ನು ಬಂಧಿಸಲು ಅವಕಾಶ ಕೊಡಬೇಕು. ನಿರೀಕ್ಷಣಾ ಜಾಮೀನು ಮಂಜೂರು ಮಾಡಬಾರದೆಂದು ವಾದ ಮಂಡಿಸಿದ್ದರು. ಈ ಕೊಲೆ ಕೇಸಲ್ಲಿ ಕೋಕಾ ಕಾಯ್ದೆಯಡಿ ಕೇಸ್ ದಾಖಲಿಸಿ, ತನಿಖೆ ನಡೆಸುತ್ತಿರುವುದಾಗಿ ಸಿಐಡಿ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದ್ದರು. ಇದೀಗ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now