ವಿಜಯಪುರ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವ ಉಂಟಾಗಿದೆ. ಏಕಾಏಕಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದರಿಂದ ವಿಜಯಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ.
ವಿಜಯಪುರದಲ್ಲಿ ಇಂದು ಬೆಳಗ್ಗೆ 11.43ರ ಸುಮಾರಿಗೆ ಜೋರಾದ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವವಾಗಿದೆ.ಆದರ್ಶ ನಗರ ಭೂತನಾಳ ಪಾನಿ ನಗರ ಮತ್ತು ಇತರೆ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ.ಮನೆಯಲ್ಲಿದ್ದಂತ ಪಾತ್ರೆಗಳು ಕೆಳಗೆ ಬಿದ್ದು ಸದ್ದು ಮಾಡಿದ್ದಾವೆ.
ಕೆಲ ತಿಂಗಳುಗಳ ಹಿಂದೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಮಟ್ಟದ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

