Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ  ರೈಲುಗಳ ನಿಲುಗಡೆ ಹಾಗೂ ರೈಲ್ವೆ ಸೇತುವೆಗಳ ನಿರ್ಮಾಣ: ಕೇಂದ್ರ ಸಚಿವರಿಗೆ ಮನವಿ ; ಆ ಪತ್ರದಲ್ಲಿ ಏನೇನಿದೆ..?

---Advertisement---

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಳ ವರ್ಷಗಳಿಂದ ಯೋಜನೆಯಲ್ಲೇ ರೈಲ್ವೆ ನಿಲ್ದಾಣಗಳಲ್ಲಿ ಕೆಲವೊಂದು ರೈಲುಗಳ ನಿಲುಗಡೆಗೆ ಹಾಗೂ ನೂತನ ರೈಲುಗಳ ಓಡಾಟ ಪ್ರಾರಂಭಿಸುವ ಬಗ್ಗೆ, ಮತ್ತು ರೈಲ್ವೆ ಮೇಲು ಸೇತುವೆ ಹಾಗೂ ಕೆಳಸೇತುವೆಗಳ ನಿರ್ಮಾಣದ ಬಗ್ಗೆ ಇಂದು ನವದೆಹಲಿಯಲ್ಲಿ ಸಂಸದ ಗೋವಿಂದ ಎಂ.ಕಾರಜೋಳರವರು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‍ರನ್ನು ಭೇಟಿ ಮಾಡಿ ಮನವಿ ಮಾಡಿದರು.

ಮನವಿ ಪತ್ರದಲ್ಲಿ ಈ ಎಲ್ಲಾ ವಿಷಯಗಳಿವೆ:

ಹೊಸದುರ್ಗ ರೋಡ್ ರೈಲ್ವೆ ನಿಲ್ದಾಣದಲ್ಲಿ ವಾಸ್ಕೋಡಾಗಾಮ-ಯಶವಮತಪುರ ಎಕ್ಸ್‍ಪ್ರೆಸ್, ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸ್‍ಪ್ರೆಸ್, ಚಾಲುಕ್ಯ ಎಕ್ಸ್‍ಪ್ರೆಸ್, ಹೊಳಲ್ಕೆರೆ ರೈಲ್ವೆ ನಿಲ್ದಾಣದಲ್ಲಿ ಸಿದ್ದಗಂಗ ಇಂಟರ್‍ಸಿಟಿ, ವಾಸ್ಕೋಡಾಗಾಮ, ವಿಶ್ವಮಾನವ, ವಿಜಯಪುರ-ಹಾಸನ-ಮಂಗಳೂರು ಟ್ರೈನುಗಳ ನಿಲುಗಡೆ, ರಾಮಗಿರಿ ರೈಲ್ವೆ ನಿಲ್ದಾಣದಲ್ಲಿ ಸಿದ್ದಗಂಗ ಇಂಟರ್‍ಸಿಟಿ, ವಾಸ್ಕೋಡಾಗಾಮ, ಕಾರಟಗಿ-ಯಶವಂತಪುರ ಟ್ರೈನುಗಳ ನಿಲುಗಡೆ, ಚಿಕ್ಕಜಾಜೂರಿನಲ್ಲಿ ಕರ್ನಾಟಕ ಸಂಪರ್ಕ ಕ್ರಾಂತಿ, ಚಳ್ಳಕೆರೆ ರೈಲ್ವೆ ನಿಲ್ದಾಣದಲ್ಲಿ ಮೈಸೂರು-ಸಾಯಿನಗರ ಶಿರಡಿ ಟ್ರೈನ್, ಸಿಂಧನೂರು ಎಕ್ಸ್‍ಪ್ರೆಸ್, ಟ್ರೈನುಗಳಿಗೆ ನಿಲುಗಡೆ ಒದಗಿಸುವುದು.

ಕರೋನಾ ಸಂದರ್ಭದಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಹೊಸಪೇಟೆ-ಬೆಂಗಳೂರು ಟ್ರೈನು, ಶಿವಮೊಗ್ಗ-ಚನ್ನೈ ವಯಾ: ಚಿತ್ರದುರ್ಗ,ಬಳ್ಳಾರಿ,ರೇನುಗುಂಟ, ಟ್ರೈನುಗಳನ್ನು ಪುನ: ಪ್ರಾರಂಭಿಸುವುದು. ಈ ಮೊದಲಿದ್ದ ಹುಬ್ಬಳ್ಳಿ-ಚಿತ್ರದುರ್ಗ ಪ್ಯಾಸೆಂಜರ್ ಟ್ರೈನ್ ಈಗ ಚಿಕ್ಕಜಾಜೂರುವರೆಗೆ ಮಾತ್ರ ಸಂಚರಿಸುತ್ತಿದೆ, ಇದನ್ನು ಚಿತ್ರದುರ್ಗದವರೆಗೆ ವಿಸ್ತರಿಸುವುದು.

ಹೊಸದಾಗಿ ಬೀದರ್ ನಿಂದ ಚಿತ್ರದುರ್ಗ ಮಾರ್ಗವಾಗಿ ಮಂಗಳೂರಿಗೆ ಹಾಗೂ ವಿಜಯಪುರದಿಂದ ಚಿತ್ರದುರ್ಗ ಮಾರ್ಗವಾಗಿ ಮೈಸೂರಿಗೆ ಹಾಗೂ ಶಿವಮೊಗ್ಗದಿಂದ ಚಿತ್ರದುರ್ಗ ಮಾರ್ಗವಾಗಿ ಹೊಸಪೇಟೆಗೆ ನೂತನ ಟ್ರೈನುಗಳ ಓಡಾಟ ಪ್ರಾರಂಭಿಸುವುದು.

ಚಳ್ಳಕೆರೆ ನಗರ ಪರಿಮಿತಿಯಲ್ಲಿ ರೈಲ್ವೆ ಲೆವೆಲ್ ಕ್ರಾಸಿಂಗ್ 45 ಕ್ಕೆ ಮೇಲು ಸೇತುವೆ ನಿರ್ಮಾಣ, ರಾಮಗಿರಿ ಬಳಿ ಲೆವೆಲ್ ಕ್ರಾಸಿಂಗ್ 77 ಎ ಕ್ಕೆ ಮೇಲು ಸೇತುವೆ ನಿರ್ಮಾಣ, ಬೇಡರೆಡ್ಡಿಹಳ್ಳಿ ಬಳಿ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿಗೆ ಅಡ್ಡಲಾಗಿ ಮೇಲುಸೇತುವೆ ನಿರ್ಮಾಣ ಸೇರಿದಂತೆ ಚಿತ್ರದುರ್ಗ ನಗರದಲ್ಲಿ ಚಿತ್ರದುರ್ಗ-ದಾವಣಗೆರೆ ಮಾರ್ಗದಲ್ಲಿ ಮುಖ್ಯರಸ್ತೆಯಿಂದ ರೈಲ್ವೆ ಸ್ಟೇಷನ್‍ವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವುದು.

ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರೈಲ್ವೆ ಸಚಿವರು ಈಗಾಗಲೇ ತಾವು ಈ ಹಿಂದೆ ಸಲ್ಲಿಸಿದ್ದ ಮನವಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ರೈಲುಗಳ ನಿಲುಗಡೆಗಳ ಕುರಿತು ಕಾರ್ಯಸಾಧ್ಯತಾ ವರದಿ ನೀಡಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ತಕ್ಷಣ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now