Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಮಾರಾಟ : ಕಾನೂನು ಕ್ರಮಕ್ಕೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ಬಡವರ ಹೊಟ್ಟೆ ತುಂಬಿಸುವುದಕ್ಕಾಗಿ ರಾಜ್ಯ ಸರ್ಕಾರ ಉಚಿತವಾಗಿ ನೀಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ನ್ಯಾಯಬೆಲೆ ಅಂಗಡಿಗಳ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಜೈಹಿಂದ್ ರಕ್ಷಣಾ ವೇದಿಕೆಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

 

ಪ್ರತಿ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ ಒಂದು ಗಂಟೆ ಹಾಗೂ ಸಂಜೆ ನಾಲ್ಕರಿಂದ ಎಂಟು ಗಂಟೆಯತನಕ ಪಡಿತರ ಧಾನ್ಯಗಳನ್ನು ವಿತರಿಸಬೇಕೆಂಬ ನಿಯಮವಿದೆ. ನ್ಯಾಯಬೆಲೆ ಅಂಗಡಿಗಳವರು ಯಾವ ಮಾನದಂಡವನ್ನು ಪಾಲಿಸದಿರುವುದರಿಂದ ಪಡಿತರ ಚೀಟಿದಾರರು ತೊಂದರೆ ಅನುಭವಿಸುವಂತಾಗಿದೆ. ಯಾವ ಸಮಯದಲ್ಲಿ ಅಕ್ಕಿ ನೀಡುತ್ತಾರೆಂಬುದೇ ಗೊತ್ತಾಗುವುದಿಲ್ಲ. ಒಂದು ಪಡಿತರ ಚೀಟಿಗೆ 20 ರಿಂದ 30 ರೂ.ಗಳನ್ನು ವಸೂಲಿ ಮಾಡಲಾಗುತ್ತಿದೆ. ತೂಕದಲ್ಲಿಯೂ ವಂಚನೆಯಾಗುತ್ತಿದೆ. ನ್ಯಾಯಬೆಲೆ ಅಂಗಡಿಯ ಆಡಿಟ್‍ಗಳನ್ನು ಪರಿಶೀಲಿಸಿ ಅಕ್ರಮ ಎಸಗುತ್ತಿರುವ ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ರದ್ದುಪಡಿಸುವಂತೆ ಜೈಹಿಂದ್ ರಕ್ಷಣಾ ವೇದಿಕೆ ಯುವ ಘಟಕದ ಅಧ್ಯಕ್ಷ ಸೈಯದ್ ಅಶ್ವಕ್ ಅಹಮದ್ ಒತ್ತಾಯಿಸಿದರು.
ತೋಫಿಕ್, ನಿರಂಜನಮೂರ್ತಿ, ರಮೇಶ, ಅನ್ವರ್ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...