Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ವರ್ಗಾವಣೆ: ನೂತನ ಎಸ್ ಪಿ ಯಾರು ಗೊತ್ತೆ?

---Advertisement---

ದಾವಣಗೆರೆ ಎಸ್‌ಪಿಯಾಗಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸ್ಥಳ ನಿಯೋಜನೆ ಮಾಡಿಲ್ಲ.ಈ ಕುರಿತು ಸಂಜಯ್ ಬಿ.ಎಸ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-4) ಆದೇಶವನ್ನು ಹೊರಡಿಸಿದ್ದಾರೆ.

ಉಮಾ ಪ್ರಶಾಂತ್‌ ಆಗಸ್ಟ್ 2022ರ ಬಳಿಕ ದಾವಣಗೆರೆ ಎಸ್‌ಪಿಯಾಗಿ ಅಧಿಕಾರವಹಿಸಿಕೊಂಡರು. ಅದಕ್ಕೂ ಮೊದಲು ಅವರು ಚಿಕ್ಕಮಗಳೂರು ಎಸ್‌ಪಿಯಾಗಿದ್ದರು. ಚಿಕ್ಕಮಗಳೂರಿನ ಮೊದಲ ಮಹಿಳಾ ಎಸ್ಪಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಅವರು ಮಂಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ (ACB) ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿಯೂ ಸೇವೆ ಸಲ್ಲಿಸಿದ್ದರು.

ದಾವಣಗೆರೆಯ ನೂತನ ಎಸ್‌ಪಿಯಾಗಿ ಶೇಖರ್ ಹೆಚ್.ತೆಕ್ಕಣ್ಣವರ್ (ಕೆಎನ್;2014) ನೇಮಕ ಮಾಡಲಾಗಿದೆ. ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಅವರನ್ನು ದಾವಣಗೆರೆ ಎಸ್‌ಪಿಯಾಗಿ ನೇಮಕ ಮಾಡಲಾಗಿದೆ. ಗುಪ್ತಚರ ವಿಭಾಗ, ಬೆಂಗಳೂರು ಎಸ್‌ಪಿಯಾಗಿ ಅವರು ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now