ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ಜೋರಾಗಿ ನಡೆದಿದ್ದು ಇದೀಗ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.ವ ಸತಿ ಸಚಿವ ಜಮೀರ್ ಅಹ್ಮದ್, ಸಿದ್ದರಾಮಯ್ಯ ಅವರು 2028ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ಸದ್ಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಖುರ್ಚಿಯಲ್ಲಿ ಭದ್ರವಾಗಿ ಕುಳಿತಿದ್ದಾರೆ ಮತ್ತು ಅವರ ಆಡಳಿತದ ಬಗ್ಗೆ ಯಾವುದೇ ಸಂಶಯವಿಲ್ಲ, ರಾಜ್ಯದಲ್ಲಿ ಮುಂದಿನ 2028ರ ವಿಧಾನಸಭಾ ಚುನಾವಣೆಯು ಕೂಡ ಸಿದ್ದರಾಮಯ್ಯ ಅವರ ಸಾರಥ್ಯದಲ್ಲೇ ನಡೆಯಲಿದೆ ಎಂಬ ಮಹತ್ವದ ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಬದಲಾವಣೆಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್, ಕಾಂಗ್ರೆಸ್ ಒಂದು ಹೈಕಮಾಂಡ್ ಸಂಸ್ಕೃತಿಯುಳ್ಳ ಪಕ್ಷವಾಗಿದ್ದು, ಅಂತಿಮ ತೀರ್ಮಾನಗಳನ್ನು ವರಿಷ್ಠರೇ ತೆಗೆದುಕೊಳ್ಳುತ್ತಾರೆ ,ಮುಖ್ಯಮಂತ್ರಿಯನ್ನು ಬದಲಾಯಿಸುವುದು ಅದು ಸಂಪೂರ್ಣವಾಗಿ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















