Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಹಿಳೆಯರ ಗಮನಕ್ಕೆ:  ಫ್ರೀ ಬಸ್‌ಗೆ ಇನ್ಮೇಲೆ ಸ್ಮಾರ್ಟ್ ಕಾರ್ಡ್ ಕಡ್ಡಾಯ

---Advertisement---

ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ‘ಶಕ್ತಿ’ ಯೋಜನೆಗೆ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಇಲ್ಲಿಯವರೆಗೆ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿ ತೋರಿಸಿ ಪ್ರಯಾಣಿಸುತ್ತಿದ್ದರು. ಆದರೆ, ಇನ್ನು ಮುಂದೆ ಕೇವಲ ‘ಶಕ್ತಿ ಸ್ಮಾರ್ಟ್ ಕಾರ್ಡ್’ (Shakti Smart Card) ಇದ್ದರೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲು ಸಂಪುಟ ಅನುಮೋದನೆ ನೀಡಿದೆ.

ಸಾರಿಗೆ ನಿಗಮಗಳ ಮೂಲಕ ಈ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಗುವುದು. ಇದರಿಂದ ಯೋಜನೆಯಲ್ಲಿ ಪಾರದರ್ಶಕತೆ ಬರಲಿದ್ದು, ಆಧಾರ್ ಕಾರ್ಡ್ ತೋರಿಸುವ ವ್ಯವಸ್ಥೆಗೆ ಹಂತ-ಹಂತವಾಗಿ ಬ್ರೇಕ್ ಬೀಳಲಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯು ಮಹತ್ವದ ಅನುಮೋದನೆ ನೀಡಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿ, “ಫಲಾನುಭವಿಗಳಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ಉಚಿತವಾಗಿ ನೀಡಲಾಗುವುದು. ಸೇವಾ ಸಿಂಧು ಪೋರ್ಟಲ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳ ಮೂಲಕ ಮಹಿಳೆಯರು ನೋಂದಣಿ ಮಾಡಿಕೊಂಡು ಕಾರ್ಡ್ ಪಡೆಯಬಹುದು. ಕಾರ್ಡ್‌ಗಳ ತಯಾರಿಕೆಗೆ ಸ್ವಲ್ಪ ಸಮಯ ಹಿಡಿಯಲಿದ್ದು, ಶೀಘ್ರದಲ್ಲೇ ವಿತರಣೆ ಆರಂಭಿಸಲಾಗುವುದು,” ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...