Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ: ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

---Advertisement---

 

ಚಿತ್ರದುರ್ಗ. ಫೆ.13: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ಪಂಪ್‍ಹೌಸ್‍ಗಳಿಗೆ ಬೆಸ್ಕಾಂ ಇಲಾಖೆಯ ನಿರ್ವಹಣೆ ಕಾಮಗಾರಿ ನಡೆಯುವುದರಿಂದ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

 

ವಾಣಿವಿಲಾಸ ಸಾಗರದಿಂದ ನಗರಕ್ಕೆ ನೀರು ಪಂಪ್ ಮಾಡುವ ಮಾರ್ಗದಲ್ಲಿ ವಿದ್ಯುತ್ ಲೈನ್‍ಗಳ ದುರಸ್ತಿ ಕಾರ್ಯದಿಂದಾಗಿ ನಿರಂತರ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗುತ್ತಿದೆ. ಹಾಗಾಗಿ ವಾಣಿವಿಲಾಸ ಸಾಗರ  ವ್ಯವಸ್ಥೆಯಲ್ಲಿ ಹಾಗೂ ಬೇಸಿಗೆ ಕಾಲವಾಗಿರುವುದರಿಂದ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುತ್ತಿರುತ್ತದೆ.

 

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಉಪಯೋಗಿಸಬೇಕು. ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...