Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಕಲಿ ಪತ್ರ : ಶಾಸಕ ಸುನೀಲ್ ಕುಮಾರ್, ಎಂಎಲ್ಸಿ ರವಿಕುಮಾರ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್

---Advertisement---

ಬೆಂಗಳೂರು: ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ ಎಂಬ ಪತ್ರವೊಂದು ವೈರಲ್ ಅಗಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಹಿ ಬಿಟ್ಟರೆ ಬೇರೆ ಏನು ಇರಲಿಲ್ಲ. ಅಧಿಕೃತವಾದ ಪತ್ರದಲ್ಲಿ ಇರಬೇಕಾದದ್ದು ಇರಲಿಲ್ಲ. ಆದರೆ ಈ ಪತ್ರವನ್ನ ಹಂಚಿಕೊಂಡ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಇದೀಗ ಯಾರೆಲ್ಲಾ ಆ ಪತ್ರವನ್ನ ಹಂಚಿಕೊಂಡ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಶಾಸಕ ಸುನಿಲ್ ಕುಮಾರ್, ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ದೂರು ಸಲ್ಲಿಸುತ್ತಿದ್ದೇನೆ ಎಂದು ಕಾಂಗ್ರೆಸ್ ಎಂಎಲ್ಸಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು ನೀಡಿರುವಂತ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಪ್ರಸಾರವಾಗಿರುವ ಪತ್ರವು ಸಂಪೂರ್ಣ ಕೃತಕ ಹಾಗೂ ದುರುದ್ದೇಶದಿಂದ ಕೂಡಿರುತ್ತದೆ. ದಿನಾಂಕ ಇಲ್ಲದ 2024ರ ಸಂಖ್ಯೆ ಇಲ್ಲದ ಪತ್ರ ಸೃಷ್ಟಿ ಮಾಡಿ ಅಪಪ್ರಚಾರ ಮೂಲಕ ವ್ಯಕ್ತಿತ್ವಕ್ಕೆ ಮಸಿ ಬಳಿದು ಚಾರಿತ್ರ್ಯ ಹರಣ ಮಾಡುವ ಕೆಲಸ ಮಾಡಿ ಅಪರಾಧ ಎಸಗಿರುತ್ತಾರೆ.

ಇವರ ದುರುದ್ದೇಶ ಆಗಿದೆ. ದಯವಿಟ್ಟು ಸಂಬಂಧಪಟ್ಟ ಶಾಸಕ ಮತ್ತು ವಿಧಾನ ಪರಿಷತ್ ಸದಸ್ಯರ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸಲು, ಸಂಬಂಧಿತ ಬಿಎನ್ಎಸ್ ಕಲಂಗಳನ್ನು ಅನ್ವಯಿಸಲು, ನಕಲಿ ಪತ್ರದ ಫೊರೆನ್ಸಿಕ್ ಪರಿಶೀಲನೆ ನಡೆಸಲು ಸಾಮಾಜಿಕ ಜಾಲತಾಣಗಳಲ್ಲಿ ಮೂಲ ಮೂಲವನ್ನು ಪತ್ತೆಹಚ್ಚಲು, ಮುಂದಿನ ಪ್ರಸಾರ ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ. ಹೀಗಾಗಿ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...