ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 17 : ತಾಲ್ಲೂಕಿನ ಭರಮಸಾಗರದಲ್ಲಿ ವಿದ್ಯಾರ್ಥಿಯೋರ್ವ ಖಾಸಗಿ ವಸತಿ ಶಾಲೆಯ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭರಮಸಾಗರ ಗ್ರಾಮದ ಖಾಸಗಿ ವಸತಿ ಶಾಲೆಯ SSLC ವಿದ್ಯಾರ್ಥಿ ಓದುತ್ತಿದ್ದ ವಿದ್ಯಾರ್ಥಿ ಕೊಟ್ರೇಶ್(16 ವರ್ಷ) ಸೋಮವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 3ನೇ ಮಹಡಿಯಿಂದ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಭರಮಸಾಗರದ ಕರಿಯಣ್ಣನಹಳ್ಳಿ ಗ್ರಾಮದ ಗುರುಲಿಂಗಯ್ಯ ಎಂಬುವರ ಪುತ್ರ ಕೊಟ್ರೇಶ್. ಈ ವಿದ್ಯಾರ್ಥಿ 6 ನೇ ತರಗತಿಯಿಂದಲೂ ಅದೇ ಖಸಗಿ ಶಾಲೆಯಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಎಸ್ ಪಿ ರಂಜಿತ್ ಬಂಡಾರು ಅವರು ಭೇಟಿ ನೀಡಿ ಪರಿಶೀಲಿಸಿದರು.






