ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 17 : ತಾಲ್ಲೂಕಿನ ಕೆಂಚವೀರನಹಳ್ಳಿ ಗ್ರಾಮದಲ್ಲಿ ಮೇವಿನ ಬಣಿವೆಗೆ ಬೆಂಕಿಬಿದ್ದು ಸಂಪೂರ್ಣ ಭಸ್ಮ ವಾಗಿದೆ.
ಕೆಂಚವೀರನಹಳ್ಳಿ ಗ್ರಾಮದ ಮಲ್ಲಯ್ಯ ಎನ್ನುವ ರೈತನಿಗೆ ಸೇರಿದ ಮೇವಿನ ಬಣವೆ ಬೆಂಕಿ ಬಿದ್ದಿದೆ. ಮನೆ ಪಕ್ಕದಲ್ಲಿದ್ದ ಬಣವೆ ಹಾಕಿಕೊಡಿದ್ದರಿಂದ ಬೆಂಕಿ ಜ್ವಾಲೆಗೆ ಕಿಟಕಿ ಮತ್ತು ಬಾಗಿಲುಗಳಿಗೂ ಬೆಂಕಿ ಆವರಿಸಿದೆ. ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿ ಯಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಬಣಿವೆ ಸುಟ್ಟು ನಾಶವಾದ ಕಾರಣ ಕುರಿ-ಮೇಕೆಗಳಿಗೆ ಮೇವಿನ ಕೊರತೆ ಉಂಟಾಗಿದೆ. ಇದರಿಂದಾಗಿ ರೈತ ಮಲ್ಲಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಘಟನೆಯಲ್ಲಿ ಕಿಡಿಗೇಡಿಗಳ ಕೈವಾಡ ಇರಬಹುದು ಎಂಬ ಶಂಕೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ. ಗ್ರಾಮಸ್ಥರು ಸರ್ಕಾರದಿಂದ ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











