Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಹುಲ್ ಗಾಂಧಿ ವಾರ್ಷಿಕ ಆದಾಯ ಎಷ್ಟು ಗೊತ್ತೆ ?

---Advertisement---

2019ರಲ್ಲಿ ಇದು 15.88 ಕೋಟಿ ರೂಪಾಯಿ ಇದ್ದು,2024ರ ಲೋಕಸಭಾ ಚುನಾವಣೆಯ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಹಿರಂಗವಾಗಿತ್ತು. ಅದರ ಪ್ರಕಾರ, ಅವರು ತಮ್ಮ ಒಟ್ಟು ಆಸ್ತಿಯನ್ನು ಸುಮಾರು 20.39 ಕೋಟಿ ರೂಪಾಯಿ ಎಂದು ಘೋಷಿಸಿದ್ದರು.

ತಮ್ಮ ಬಳಿ ಕೇವಲ 55,000 ರೂಪಾಯಿ ನಗದು ಇದ್ದು, ಎರಡು ಬ್ಯಾಂಕ್ ಖಾತೆಗಳಲ್ಲಿ 26.25 ಲಕ್ಷ ರೂಪಾಯಿ ಠೇವಣಿ ಇಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.25 ಕಂಪನಿಗಳಲ್ಲಿ ಒಟ್ಟು 4.33 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಹೊಂದಿದ್ದಾರೆ. ಜೊತೆಗೆ ಏಳು ಮ್ಯೂಚುವಲ್ ಫಂಡ್‌ಗಳಲ್ಲಿ 3.81 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಇದೆ.

ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಬಾಂಡ್‌ಗಳು, 61.52 ಲಕ್ಷ ರೂಪಾಯಿ ಮೌಲ್ಯದ ವಿಮಾ ಪಾಲಿಸಿಗಳು ಮತ್ತು 4.20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಆಭರಣಗಳನ್ನು ಹೊಂದಿದ್ದಾರೆ. ಒಟ್ಟಾರೆ ಅವರ ಚರ ಆಸ್ತಿ ಸುಮಾರು 9.24 ಕೋಟಿ ರೂಪಾಯಿಗಳಷ್ಟಿದೆ. ಸ್ಥಿರ ಆಸ್ತಿಯಾಗಿ ಸುಮಾರು 11.15 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಹೆಸರಿನಲ್ಲಿ ಯಾವುದೇ ವಾಹನ ನೋಂದಣಿ ಇಲ್ಲ ಎಂದು ಅವರು ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ. ವಾರ್ಷಿಕ ಆದಾಯ ಕೋಟಿ ದಾಟಿದರೂ ಸ್ವಂತ ಕಾರು ಇಲ್ಲದಿರುವುದು ಹಲವರ ಗಮನ ಸೆಳೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...