ಮೂರುವರೆ ವರ್ಷದ ಬಾಲಕ ಹಿತಾರ್ಥ್ ದಾವಣಗೆರೆಯಲ್ಲಿ ಪೋಲಿಸ್ ಆಗಿದ್ದಾನೆ! ಅದು ಹೇಗೆ ಗೊತ್ತೆ? ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರುವರೆ ವರ್ಷದ ಬಾಲಕ ಹಿತಾರ್ಥ್ ಅವರನ್ನು ಎಸ್ ಪಿ ಚೇರ್ ನಲ್ಲಿ ಕೂರಿಸಿದ ಘಟನೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಹೊನ್ನಾಳಿ ತಾಲೂಕಿನ ಹೊಸಳ್ಳಿ ಗ್ರಾಮದ ಪ್ರಭು ಹಾಗೂ ಅನುಷಾ ದಂಪತಿಯ ಎರಡನೇ ಪುತ್ರನಾದ ಹಿತಾರ್ಥ್‌ಗೆ ಒಂದುವರೆ ವರ್ಷ ವಯಸ್ಸಿನಲ್ಲಿಯೇ ರಕ್ತದ ಕ್ಯಾನ್ಸರ್ ಪತ್ತೆಯಾಗಿತ್ತು. ಕಳೆದ ಎರಡು ವರ್ಷಗಳಿಂದ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ.ಮಗನನ್ನು ಪೊಲೀಸ್ ಮಾಡಬೇಕೆಂಬ ಬಾಲಕನ ತಂದೆಯ ಆಸೆಗೆ ಎಸ್ಪಿ ಶೇಖರ್ ಹೆಚ್ ಟಿ, ಖಾಕಿ ತೊಟ್ಟು ಬಂದ ಪುಟ್ಟ ಮಗುವನ್ನು ತಮ್ಮ ಚೇರ್ ಮೇಲೆ ಕೂರಿಸಿದ್ದಾರೆ.
ಪೊಲೀಸ್ ಅಧಿಕಾರಿಯಾಗಬೇಕೆಂದು ಆಸೆ ಹೊತ್ತಿದ್ದ ಬಾಲಕನ ತಂದೆ ಪ್ರಭುವಿಗೆ ಆ ಆಸೆ ಈಡೇರಿರಲಿಲ್ಲ. ಹಾಗಾಗಿ ಹಿತಾರ್ಥ್ ಹುಟ್ಟಿದ ದಿನವೇ ತಮ್ಮ ಮಗ ಪೊಲೀಸ್ ಅಧಿಕಾರಿ ಆಗಬೇಕು ಎಂಬ ಆಸೆಯೂ ಹುಟ್ಟಿಕೊಂಡಿತ್ತು. ಆದರೆ ಮಗುವಿಗೆ ಬ್ಲಡ್ ಕ್ಯಾನ್ಸರ್ ಇದೆ ಎಂದು ಗೊತ್ತಾಯಿತು! ಹಾಗಾಗಿ ಮಗನಿಗೆ ಖಾಕಿ ಯೂನಿಫಾರ್ಮ್ ಧರಿಸಿ ಎಸ್‌ಪಿ ಕಚೇರಿಗೆ ಕರೆದುಕೊಂಡು ಬಂದಿದ್ದರು. ಪರಿಸ್ಥಿತಿ ತಿಳಿದ ಎಸ್‌ಪಿ ಶೇಖರ್ ಹೆಚ್.ಟಿ. ಅವರು ಹಿತಾರ್ಥ್‌ಗೆ ಹೂಗುಚ್ಛ ನೀಡಿ ಸ್ವಾಗತಿಸಿ, ತಮ್ಮ ಕುರ್ಚಿಯಲ್ಲಿ ಕೂರಿಸಿ ಕೆಲಕಾಲ ‘ಎಸ್‌ಪಿ’ ಆಗುವ ಅವಕಾಶ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











