ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೈದರಾಬಾದ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೃದಯದ ಶಸ್ತ್ರ ಚಿಕಿತ್ಸೆ ಕೂಡ ನಡೆದಿದೆ , ಈಗ ಸ್ವಾಮೀಜಿ ಚೇತರಿಸಿಕೊಳ್ಳುತ್ತಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು , ಆರೋಗ್ಯವನ್ನ ವಿಚಾರಿಸಲು ಕರೆ ಮಾಡಿದ್ದು ಖುದ್ದು ಸ್ವಾಮಿಗಳೇ ಸಿಎಂ ಜೊತೆ ಮಾತನಾಡಿದ್ದಾರೆ.ನಾನೀಗ ಗುಣಮುಖನಾಗುತ್ತಿದ್ದೇನೆ, ನನ್ನ ಹೃದಯಕ್ಕೆ 2-3 ಸ್ಟಂಟ್ ಹಾಕಿದ್ದಾರೆ ಎಂದು ಸ್ವಾಮೀಜಿ ಹೇಳಿದಾಗ ಹೃದಯದ ವಿಚಾರದಲ್ಲಿ ನೆಗಲೆಟ್ ಮಾಡಬಾರದು ಮೊದಲು ಆರೋಗ್ಯ ಮುಖ್ಯ ಎಂದು ಸಿಎಂ ಕಿವಿಮಾತು ಹೇಳಿದ್ದಾರೆ.
ಪ್ರಸನ್ನಾನಂದಪುರಿ ಸ್ವಾಮೀಜಿಗಳ ಕುಶಲೋಪರಿಯನ್ನು ಸಿಎಂ ಪೋನಿನ ಮೂಲಕ ವಿಚಾರಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಭಕ್ತರಲ್ಲಿ ಸ್ವಾಮೀಜಿ ಗುಣಮುಖರಾಗುತ್ತಿದ್ದಾರೆ ಎಂಬ ಸಂತಸ ಮೂಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











