ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 19 : ತಾಲೂಕಿನ ಹೆಗ್ಗೆರೆ ಗೇಟ್ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಕಳೆದ ರಾತ್ರಿ 12 ಗಂಟೆ ಸಮಯದಲ್ಲಿ ನಡೆದಿದೆ.
ಚಳ್ಳಕೆರೆ-ಹಿರಿಯೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನ ಚಾಲಕ ಬೆಂಗಳೂರಿನ ಮೂಲದವರಾದ ಬಸವರಾಜ್ (46 ವರ್ಷ) ಸ್ಥಳದಲ್ಲೆ ಮೃತಪಟ್ಟಿದ್ದು, ಇದೇ ಕಾರಿನಲ್ಲಿದ್ದ ಶಿವಪ್ಪ (45 ವರ್ಷ)
ವಿರಭದ್ರಪ್ಪ (58 ವರ್ಷ) ದ್ರುವ (12 ವರ್ಷ) ಗಾಯಗಳಾಗಿದ್ದು, ಅವರೆಲ್ಲರನ್ನೂ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಚಿತ್ರದುರ್ಗ ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ. ಶಿರುಗುಪ್ಪದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ಕಾರು ಚಾಲಕನ ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂಬ ಮಾಹಿತಿ ತಿಳಿದು ಬಂದಿದೆ. ಸ್ಥಳಕ್ಕೆ ಚಳ್ಳಕೆರೆ ಪಿಎಸ್ ಐ ಈರೇಶ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



