Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಪ್ರಕರಣದಲ್ಲಿ ಸದ್ದು ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್

---Advertisement---

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಸಾಬೀತು ಮಾಡಲು ಸಾಕಷ್ಟು ಶ್ರಮವಹಿಸಿದ್ದ ಸ್ನೇಹಮಯಿ ಕೃಷ್ಣರನ್ನ ಇದೀಗ ಬೆಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಮೂಡಾದ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆಯೂ ಮಾತನ್ನಾಡಿದ್ದರು. ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ತೆಗೆದುಕೊಳ್ಳುವುದಕ್ಕೆ ಶಾಲಿನಿ ರಜನೀಶ್ ಅವರಿಗೆ ಒಂದೂವರೆ ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಸಂಬಂಧ ಮೂಡಾ ಮಾಜಿ ಆಯುಕ್ತ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು‌. ದೂರಿನ ಅನ್ವಯ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರು ಸೈಬರ್ ಪೊಲೀಸರು ಇಂದು ಬಂಧಿಸಿದ್ದಾರೆ. ಸಿಟಿ ಸಿವಿಲ್ ಕೋರ್ಟ್ ಬಳಿ ಸ್ನೇಹಮಯಿ ಕೃಷ್ಣ ಅವರನ್ನು ಅರೆಸ್ಟ್ ಮಾಡಲಾಗಿದೆ. ಭ್ರಷ್ಟಾಚಾರ ಆರೋಪ ಮಾಡಿ, ದೂರು ನೀಡಿದ್ದರು. ಸದ್ಯ ಅವರನ್ನ ಸೈಬರ್ ಕ್ರೈಮ್ ಪೊಲೀಸರು ಕರೆದುಕೊಂಡು ಹೋಗಿದ್ದು, ವಿಚಾರಣೆ ನಡೆಸಲಿದ್ದಾರೆ. ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಹೋರಾಟ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೂ ಕಂಟಕವಾಗುವಂತೆ ಈ ಕೇಸ್ ಸಾಗಿತ್ತು. ಆರೋಪಗಳನ್ನು ಮಾಡುತ್ತಲೇ ಬಂದಿದ್ದ ಸ್ನೇಹಮಯಿ ಕೃಷ್ಣ ಅವರು, ಶಾಲಿನಿ ರಜನೀಶ್ ಅವರ ವಿರುದ್ಧ ಮಾಡಿದ್ದಂತ ಆರೋಪದಿಂದ ಅರೆಸ್ಟ್ ಆಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...