Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಹಾನಾಯಕ ದಲಿತ ಸೇನೆ ಜಿಲ್ಲಾಧ್ಯಕ್ಷರಾಗಿ ದುರುಗೇಶ್ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 20 : ಮಹಾನಾಯಕ ದಲಿತ ಸೇನೆ ಜಿಲ್ಲಾಧ್ಯಕ್ಷರಾಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ದುರುಗೇಶ್ ಓ. ಇವರನ್ನು ನೇಮಕ ಮಾಡಲಾಗಿದೆ.

ಮಹಾನಾಯಕ ದಲಿತ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ಎ.ತಾಳಿಕೆರೆ ಶುಕ್ರವಾರ ಪ್ರವಾಸಿ ಮಂದಿರದಲ್ಲಿ ದುರುಗೇಶ್ ಓ. ಇವರಿಗೆ ನೇಮಕ ಪತ್ರ ವಿತರಿಸಿ ಮಾತನಾಡುತ್ತ ಬುದ್ದ, ಬಸವ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಶೋಷಿತರು, ಅಸ್ಪøಶ್ಯರು, ಧಮನಿತರ ಪರವಾಗಿ ನಿಲ್ಲಬೇಕು. ಎಲ್ಲಿ ಅನ್ಯಾಯ, ಶೋಷಣೆಯಾಗುತ್ತದೊ ಅಲ್ಲಿ ಪ್ರಾಮಾಣಿಕವಾಗಿ ಹೋರಾಡಿ ನೊಂದವರಿಗೆ ನ್ಯಾಯ ಒದಗಿಸುವಂತೆ ಸೂಚಿಸಿದರು.

ಮಹಾನಾಯಕ ದಲಿತ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಳೆಯಪ್ಪ ಕೆ.ಸಾಕ್ಯ, ಎಸ್ಸಿ.ಎಸ್ಟಿ.ದೌರ್ಜನ್ಯ ತಡೆ ಸಮಿತಿ ಸದಸ್ಯ ಪ್ರಶಾಂತ್ ಕೂಲಿಕರ್, ಪ್ರಜಾ ಕಲ್ಯಾಣ ಸಮಿತಿ ಅಧ್ಯಕ್ಷ ಹರೀಶ್ ಟಿ.ಎನ್, ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿ ರಾಜ್ಯಾಧ್ಯಕ್ಷ ಜಪಾನ್ ಶ್ರೀನಿವಾಸ್, ಚಳ್ಳಕೆರೆ ಪೆನ್ನೇಶ್, ಚಂದ್ರು, ಚೇತನ, ಕೆಂಚಪ್ಪ ಪ್ರಜ್ವಲ್, ವಿಶ್ವಾಸ, ದಿನೇಶ್, ಹನುಮಂತ, ಸಿದ್ದೇಶ, ಪವನ್, ಬಾಬು ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...