Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತರಬೇತಿಯಿಂದ ಮಹಿಳೆಯರ ಸ್ವಾವಲಂಬನೆ – ಬಜ್ ಇಂಡಿಯಾ ಟ್ರಸ್ಟ್

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 20 : ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದ ಮಹಿಳೆಯರು ಸ್ವಾವಲಂಭಿಗಳಾಗಿ ಬದುಕು ರೂಪಿಸಿಕೊಂಡಿದ್ದಾರೆಂದು ಬಜ್ ಇಂಡಿಯಾ ಟ್ರಸ್ಟ್/ಬಜ್ ವಿಮೆನ್ ಕಾರ್ಯಕ್ರಮ ವ್ಯವಸ್ಥಾಪಕರಾದ ವೆಂಕಟೇಶ್ ಜಿ.ಎಸ್. ತಿಳಿಸಿದರು.

 

ವಾಲ್ಮೀಕಿ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಗೆಳತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸಂಸ್ಥೆಯಲ್ಲಿ ಹದಿನೆಂಟು ಸಾವಿರ ಸ್ವಯಂ ಸೇವಕಿಯರಿದ್ದು, ಮಹಿಳೆಯರಿಗೆ ತರಬೇತಿ ನೀಡಿ ಸ್ವಉದ್ಯೋಗ ಕೈಗೊಳ್ಳುವಲ್ಲಿ ಪ್ರೇರೇಪಿಸಲಾಗುತ್ತಿದೆ. ಇಲ್ಲಿಯವರೆಗೂ ತರಬೇತಿ ಪಡೆದ ಮಹಿಳೆಯರು ಮತ್ತೊಬ್ಬರಿಗೆ ಹೊರೆಯಾಗದಂತೆ ಸ್ವಾವಲಂಭಿಯಾಗಿ ಜೀವಿಸುತ್ತಿದ್ದಾರೆಂದರು.

 

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ ಮಾತನಾಡಿ ಮಹಿಳೆಯರು ಜೀವನಕ್ಕಾಗಿ ತರಬೇತಿ ಪಡೆಯುವುದರ ಜೊತೆಗೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ಕೊಡಬೇಕು. ಆಧುನಿಕ ಯುಗದಲ್ಲಿ ಎಲ್ಲರೂ ಒಂದಲ್ಲ ಒಂದು ರೀತಿಯ ಒತ್ತಡದ ಜೀವನ ಸಾಗಿಸುತ್ತಿರುವುದರಿಂದ ಆರೋಗ್ಯವೇ ನಿಜವಾದ ಸಂಪತ್ತೆನ್ನುವಂತಾಗಿದೆ ಎಂದರು.

 

ಚಿತ್ರದುರ್ಗ ಲೀಡ್ ಬ್ಯಾಂಕ್‍ನ ಹಿರಿಯ ವ್ಯವಸ್ಥಾಪಕಿ ಮುಖಯ್ಯ ಮಾತನಾಡುತ್ತ ಸಣ್ಣ ಉದ್ಯಮಿಗಳು ಮತ್ತು ಸ್ವಸಹಾಯ ಗುಂಪುಗಳಿಗೆ ವಿವಿಧ ಬ್ಯಾಂಕ್‍ಗಳಲ್ಲಿ ಲಭ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಬಜ್ ಇಂಡಿಯಾ ಟ್ರಸ್ಟ್/ಬಜ್ ವಿಮೆನ್ ಸಹಾಯಕ ವ್ಯವಸ್ಥಾಪಕ ಹರೀಶ ಎಂ. ಸಂಸ್ಥೆಯ ಸಿಬ್ಬಂದಿಗಳು, ಗೆಳತಿಯರು, ಹಸಿರು ಪ್ರೇರಕ ವ್ಯಾಪಾರಿಗಳು ಸೇರಿದಂತೆ 470 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...