ಬೆಂಗಳೂರಲ್ಲಿ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪಿಎ ಚಂದ್ರು ಅವರ ಪತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಚಂದ್ರು ಪುತ್ರ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ದೇಹವನ್ನು ರವಾನಿಸಲಾಗಿದೆ. ಮನೆಯಲ್ಲಿಯೇ ಹೇಮಂತ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಕಳೆದ ರಾತ್ರಿ ಘಟನೆ ನಡೆದಿದ್ದು, ಕುಟುಂಬಸ್ಥರು ಆಘಾತಗೊಂಡಿದ್ದಾರೆ.

ಬೆಂಗಳೂರಿನ ಸಂಜಯನಗರದ ಲೊಟ್ಟೆ ಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.



















