Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ವಿಶ್ವ ಮಾತೃಭಾಷೆ ದಿನ ಏಕೆ ಆಚರಿಸುತ್ತಾರೆ ಗೊತ್ತೆ ?

---Advertisement---

ಪ್ರತಿ ವ್ಯಕ್ತಿಯು ತಾನು ಹುಟ್ಟಿನಿಂದ ಮಾತನಾಡುತ್ತಿರುವ ಮತ್ತು ಆ ವ್ಯಕ್ತಿಯ ಮನೆಯಲ್ಲಿ, ಸಮುದಾಯದಲ್ಲಿ ಮಾತನಾಡುವ ಭಾಷೆಯನ್ನು ಮಾತೃಭಾಷೆ ಎಂದು ಪರಿಗಣಿಸಲಾಗುತ್ತದೆ. ಈ ಭಾಷೆಯಲ್ಲಿ ಜ್ಞಾನವನ್ನು ನೀಡಿದರೆ ಹೆಚ್ಚು ಪರಿಣಾಮಕಾರಿಯಾಗಿ ಅರ್ಥವಾಗುತ್ತದೆ.

ಫೆಬ್ರವರಿ ೨೧ನ್ನು ಪ್ರಪಂಚಾದ್ಯಂತ ವಿಶ್ವ ಮಾತೃ ಭಾಷೆ ದಿವಸವಾಗಿ ಆಚರಿಸಲಾಗುತ್ತಿದೆ. ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಬಿಂಬಿಸಲು ಮತ್ತು ಪ್ರೋತ್ಸಾಹಿಸಿ ಉಳಿಸಲು ಈ ಆಚರಣೆಯನ್ನು ಮಾಡಲಾಗುತ್ತಿದೆ. ೧೯೯೯ರಲ್ಲಿ ಮೊದಲ ಬಾರಿಗೆ ಇದನ್ನು ಯುನೆಸ್ಕೋ ಘೋಷಿಸಿತು. ಇದರ ಮುಂದುವರೆದ ಭಾಗವಾಗಿ ವಿಶ್ವಸಂಸ್ಥೆಯು ೨೦೦೮ನ್ನು ವಿಶ್ವ ಭಾಷೆಗಳ ವರ್ಷ ಎಂದು ಆಚರಿಸಿತು. ೨೦೦೦ನೆಯ ಇಸವಿಯಿಂದ ಪ್ರತಿ ವರ್ಷ ವಿಶ್ವ ಮಾತೃ ಭಾಷೆ ದಿವಸವನ್ನು ಆಚರಿಸಲಾಗುತ್ತಿದೆ.

ಯುನೆಸ್ಕೋ ಅಂದಾಜಿನ ಪ್ರಕಾರ 8,324 ಮಾತನಾಡುವ ಅಥವಾ ಸಹಿ ಮಾಡುವ ಭಾಷೆಗಳಿವೆ. ಇವುಗಳಲ್ಲಿ ಸುಮಾರು 7,000 ಭಾಷೆಗಳು ಇನ್ನೂ ಬಳಕೆಯಲ್ಲಿವೆ. ಶಿಕ್ಷಣ ವ್ಯವಸ್ಥೆಗಳು ಮತ್ತು ಸಾರ್ವಜನಿಕ ವಲಯದಲ್ಲಿ ಕೆಲವು ನೂರು ಭಾಷೆಗಳಿಗೆ ಮಾತ್ರ ನಿಜವಾಗಿಯೂ ಸ್ಥಾನ ನೀಡಲಾಗಿದೆ ಮತ್ತು ಡಿಜಿಟಲ್ ಜಗತ್ತಿನಲ್ಲಿ ನೂರಕ್ಕಿಂತ ಕಡಿಮೆ ಭಾಷೆಗಳನ್ನು ಬಳಸಲಾಗುತ್ತದೆ.

೧೯೪೭ ರಲ್ಲಿ ಭಾರತದಿಂದ ಪಾಕಿಸ್ತಾನ ವಿಭಜನೆಗೊಂಡಾಗ ಅಲ್ಲಿ ಪೂರ್ವ ಪಾಕಿಸ್ತಾನ, ಪಶ್ಚಿಮ ಪಾಕಿಸ್ತಾನ ಎಂಬ ಎರಡು ಭೂ ಪ್ರದೇಶಗಳು ರಚನೆಯಾದುವು. ಪೂರ್ವ ಪಾಕಿಸ್ತಾನವೆಂದರೆ ಇಂದಿನ ಬಾಂಗ್ಲಾದೇಶ, ಪಶ್ಚಿಮ ಪಾಕಿಸ್ತಾನವೆಂದರೆ ಈಗಿರುವ ಪಾಕಿಸ್ತಾನ. ಪೂರ್ವ ಪಾಕಿಸ್ತಾನದ ಮಾತೃಭಾಷೆ ಬಂಗಾಳಿಯಾಗಿತ್ತು. ಪಶ್ಚಿಮ ಪಾಕಿಸ್ತಾನದ ಮಾತೃಭಾಷೆ ಉರ್ದು ಆಗಿತ್ತು. ೧೯೪೮ ರಲ್ಲಿ ಪಶ್ಚಿಮ ಪಾಕಿಸ್ತಾನ ಮಾತೃಭಾಷೆ ಉರ್ದುವನ್ನು’ ರಾಷ್ಟ್ರಭಾಷೆ’ಯೆಂದು ಘೋಷಿಸಿತು.
ಇದರಿಂದ ಪೂರ್ವ ಪಾಕಿಸ್ತಾನದ ಬಂಗಾಳಿ ಭಾಷೆಯನ್ನು ಮಾತಾನಾಡುತ್ತಿದ್ದವರು ತುಂಬ ಅಸಮಾಧಾನಗೊಂಡರು. ಉರ್ದುವನ್ನು ರಾಷ್ಟ್ರಭಾಷೆ ಮಾಡಿದ್ದನ್ನು ವಿರೋಧಿಸಿ ಪ್ರತಿಭಟನೆ ಮಾಡತೊಡಗಿದರು. ಆಗ ಪಾಕ್ ಇವರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿತು. ಪಾಕ್ ಸರ್ಕಾರದ ನಿಷೇಧವನ್ನು ಮೀರಿ ೨೧-೦೨-೧೯೫೨ ರಂದು ಢಾಕಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡತೊಡಗಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದಾಗ, ಪಾಕ್ ಸರ್ಕಾರದ ಆದೇಶದಂತೆ ಪೋಲಿಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದಾಗ ಢಾಕಾ ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳು ಅಸುನೀಗಿದರು. ಬಾಂಗ್ಲಾದೇಶದ ಮಾತೃಭಾಷೆ ಬಂಗಾಳಿಯನ್ನು ಆಡಳಿತ ಭಾಷೆಯನ್ನಾಗಿ ಮಾಡಬೇಕೆಂದು ಪ್ರಾಣತೆತ್ತ ವಿದ್ಯಾರ್ಥಿಗಳ ನೆನಪಿಗಾಗಿ ಆ ದಿನವನ್ನು ವಿಶ್ವಸಂಸ್ಥೆಯ ಯುನೆಸ್ಕೊವು “ವಿಶ್ವ ಮಾತೃ ಭಾಷೆ ದಿವಸ”ವನ್ನಾಗಿ ಆಚರಿಸುವಂತೆ ಘೋಷಿಸಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now