Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೋಹಿಣಿ ಸಿಂಧೂರಿಗೆ ಕೋರ್ಟ್ ನಲ್ಲಿ ಹಿನ್ನಡೆ..!

---Advertisement---

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಾನನಷ್ಟ ಪ್ರಕರಣ ಸಂಬಂಧ ಹಿನ್ನಡೆ ಉಂಟಾಗಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ದಾಖಲಿಸಿದ್ದ ಪ್ರಕರಣ ಇದಾಗಿದೆ. ಮಾಧ್ಯಮಗಳ ಮುಂದೆ ರೋಹಿಣಿ ಅವರು ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ ಎಂದು ಡಿ.ರೂಪಾ ಮೌದ್ಗಿಲ್ ದೂರು ದಾಖಲಿಸಿದ್ದರು. ಈ ದೂರನ್ನು ರದ್ದುಪಡಿಸುವಂತೆ ರೋಹಿಣಿ ಸಿಂಧೂರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಆ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ.

ಈ ಕೇಸ್ 2023ರಲ್ಲಿ ನೀಡಿದ್ದ ಹೇಳಿಕೆಯಾಗಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ವಿಚಾರಣೆ ತಡೆ ನೀಡಿ, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ಸಲಹೆ ನೀಡಿದ್ದರು. 19-2-2023ರಂದು ನೀಡಿದ್ದ ಹೇಳಿಕೆಯಲ್ಲಿ ಅವಹೇಳನಕಾರಿ ಆರೋಪಗಳಿವರ ಎಂದು ರೂಪಾ ಆರೋಪಿಸಿ 7ನೇ ಎಸಿಎಂಎಂ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಈ ವಿವಾದ ಎರಡು ವರ್ಷಗಳಿಂದ ಮುಂದುವರಿದಿದ್ದು, ಸುಪ್ರೀಂ ಕೋರ್ಟ್ ನಿಂದ ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಲಾಗಿತ್ತು.

ಈ ಪ್ರಕರಣ ರದ್ದು ಪಡಿಸುವಂತೆ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಹೈಕೋರ್ಟ್ ಪೀಠ ತಿರಸ್ಕಾರ ಮಾಡಿದೆ. ರೋಹಿಣಿ ಸಿಂಧೂರಿ ಅವರು ನೀಡಿದ್ದ ಮಾಧ್ಯ ಹೇಳಿಕೆಯನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಅದನ್ನ 1.8 ಲಕ್ಷ ಮಂದಿ ವೀಕ್ಷಣೆ ಮಾಡಿದ್ದರು. ಈ ಸಂಬಂಧ ನೀಡಿದ್ದ ದೂರಿನಲ್ಲಿ ಉಲ್ಲೇಖ ಮಾಡಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...