Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ : ಡಿಕೆ ಶಿವಕುಮಾರ್ ಹೇಳಿದ್ದೇನು..?

---Advertisement---

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎನ್ನಲಾಗ್ತಿದೆ. ಸಿದ್ದರಾಮಯ್ಯ ಅವರು ಈ ಸಂಬಂಧ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಇದೀಗ ಈ ಬಗ್ಗೆ ಡಿಕೆ ಶಿವಕುಮಾರ್ ಅವರಿಗೂ ಪ್ರಶ್ನೆ ಎದುರಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೇಲೆ ಹಾಕಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿಯವರು ಮಾಡುತ್ತಿರಬಹುದೇನೋ. ನಾನು ಈ ಬಗ್ಗೆ ಪರಿಶೀಲನೆ ಮಾಡ್ತೀನಿ. ಬಿಜೆಪಿಯವರೋ ದಳದವರೋ ಈ ರೀತಿ ಮಾಡ್ತಿರಬಹುದು, ಗೊತ್ತಿಲ್ಲ. ಕಾರವಾರಕ್ಕೆ ಹೆಲಿಕಾಪ್ಟರ್ ನಲ್ಲಿ ಹೋಗ್ತೀನಿ. ಅಲ್ಲಿ ಕೇಳ್ತೀನಿ ಎಂದಿದ್ದಾರೆ.

ಸದ್ಯ ಈಗ ಇರುವ ಕೆಲಸ ಮಾಡಿ, ರೋಡಿಗೆ ಟಾರ್ ಹಾಕುದ್ರೆ ಸಾಕಾಗಿದೆ. 23ಕ್ಕೆ ಚಿಕ್ಕಬಳ್ಳಾಪುರದಲ್ಲಿ ನರೇಗಾ ಕೆಲಸವಿದೆ. ಇಕ್ಬಾಲ್ ಹುಸೇನ್ ಗೆ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಎಲ್ಲಾ ಇಕ್ಬಾಲ್ ಹುಸೇನ್ ಗಳಿಗೂ ಹೇಳ್ತಾ ಇದ್ದೀನಿ. ನನಗೇನಾದ್ರೂ ಒಳ್ಳೆಯದು ಮಾಡಬೇಕು ಅಂದುಕೊಂಡರೆ ಬಾಯಿಯನ್ನ ಹೊಲೆದು ಇಟ್ಟುಕೊಳ್ಳಿ. ಯಾರೆಲ್ಲಾ ನನ್ನ ವಿಚಾರದಲ್ಲಿ ಮಾತಾಡ್ತಾರೆ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದಿದ್ದಾರೆ.

ಬೆಂಗಳೂರಿಗೆ ಬಂದ ಬಳಿಕ ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಭೇಟಿ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದು, ಅವರ ಕ್ಷೇತ್ರಕ್ಕೇನಾದ್ರೂ ಇರಬೇಕು. ಇಂಡಸ್ಟ್ರಿ ಆರಂಭದ ಬಗ್ಗೆಯೂ ಮಾತಾಡಿರಬಹುದು. ದೆಹಲಿಗೆ ಹೋಗೋದು ಬರೋದು ಇದ್ದೆ ಇರುತ್ತೆ. ಮೀಟಿಂಗ್ ಗಳು ಇದ್ದಾಗ ಹೋಗೋದು ಬರೋದು ಮಾಡಬೇಕು. ನಮ್ಮ ರಾಜ್ಯದ ವಿಚಾರಗಳನ್ನ ಎಲ್ಲೆಂದರಲ್ಲಿ ಮಾತನಾಡುವುದಕ್ಕೆ ಹೋಗುವುದಿಲ್ಲ. ರಾಹುಲ್ ಗಾಂಧಿ ದೇಶದ ಬಗ್ಗೆ ಯೋಚನೆ ಮಾಡ್ತಾರೆ. ಅಭಿವೃದ್ಧಿಗೆ ಏನೆಲ್ಲಾ ಮಾಡಬೇಕು ಎಂಬ ಚರ್ಚೆಗಳಾಗ್ತಾವೆ ಎಂದು ಸ್ಪಷ್ಟನೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...