Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಡಿಓ.ಗಳಿಗೆ ಬಿ ಗ್ರೇಡ್‍ಗೆ ಮುಂಬಡ್ತಿ ನೀಡಿ : ರಮೇಶ್ ನಡಗೇರಿ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಹದಿನಾರು ವರ್ಷಗಳಿಂದಲೂ ಬಡ್ತಿಯಿಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲಾ ಪಿಡಿಓ.ಗಳಿಗೆ ಏಕಕಾಲದಲ್ಲಿ ಬಿ ಗ್ರೇಡ್‍ಗೆ ಮುಂಬಡ್ತಿ ನೀಡಬೇಕೆಂದು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಬಿ ಗ್ರೇಡ್ ಹುದ್ದೆ ಉನ್ನತಿಕರಿಸಿದ ಸಂಘದ ರಾಜ್ಯಾಧ್ಯಕ್ಷ ರಮೇಶ್ ನಡಗೇರಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

 

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 1500 ಪಿಡಿಓ.ಗಳನ್ನು ಮಾತ್ರ ಸರ್ಕಾರ ಬಿ ಗ್ರೇಡ್ ಹುದ್ದೆಗೇರಿಸಿದೆ. ಅದರಂತೆ ಉಳಿದ ಎಲ್ಲಾ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಗಳಿಗೂ ಬಡ್ತಿ ಸಿಗಬೇಕು. ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅನಿವಾರ್ಯವಾಗಿ ಹೋರಾಟಕ್ಕಿಳಿಯಬೇಕಾಗುತ್ತದೆಂದು ಎಚ್ಚರಿಸಿದರು.

ರಾಜ್ಯದಲ್ಲಿ 5694 ಗ್ರಾಮ ಪಂಚಾಯಿತಿಗಳಲ್ಲಿರುವ ಪಿಡಿಓ.ಗಳನ್ನು ತ್ವರಿತಗತಿಯಲ್ಲಿ ಅಪ್‍ಗ್ರೇಡ್‍ಗೇರಿಸಬೇಕು. ರಾಷ್ಟ್ರಪಿತ ಮಹಾತ್ಮಗಾಂಧಿ ಕಂಡ ಕನಸು ನನಸಾಗಬೇಕಾದರೆ ಸ್ಥಳೀಯ ಸರ್ಕಾರಗಳು ಬಲಿಷ್ಟವಾಗಬೇಕು. ಒಂದೆ ಇಲಾಖೆಯಲ್ಲಿ ತಾರತಮ್ಯವಿರುವುದರಿಂದ ಸಾರ್ವಜನಿಕರ ಬದುಕನ್ನು ಹಸನಾಗಿಸುವುದು ಕಷ್ಟವಾಗುತ್ತಿದೆ ಎಂದು ಪಿಡಿಓ.ಗಳಿಗಿರುವ ಸಂಕಷ್ಟಗಳನ್ನು ತೋಡಿಕೊಂಡರು.

 

ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಬಿ ಗ್ರೇಡ್ ಹುದ್ದೆ ಉನ್ನತೀರಕರಿಸಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಮಾತನಾಡಿ 2010 ರಲ್ಲಿ ಪಿಡಿಓ.ಹುದ್ದೆಗಳನ್ನು ಸೃಷ್ಠಿಸಲಾಯಿತು. ಇಲ್ಲಿಯವರೆಗೂ ಬಡ್ತಿ ಸಿಗದ ಕಾರಣ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಸಹಾಯಕ ನಿರ್ದೇಶಕರುಗಳ ಹುದ್ದೆಗೇರಲು ಅಡಚಣೆಯಾಗಿದೆ. ಹೈದರಾಬಾದ್ ಕರ್ನಾಟಕದಲ್ಲಿ 613 ಪಿಡಿಓ.ಗಳಿಗೆ ಬಡ್ತಿ ಸಿಕ್ಕಿದೆ. ಜೇಷ್ಠತಾ ಪಟ್ಟಿ ನ್ಯಾಯಾಲಯದಲ್ಲಿರುವುದರಿಂದ ವಿಳಂಭವಾಗುತ್ತಿದೆ. ಬಿ ಗ್ರೇಡ್‍ನಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ. ಹಾಗಾಗಿ ಎಲ್ಲಾ ಪಿಡಿಓ.ಗಳಿಗೆ ಮುಂಬಡ್ತಿ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಜಯಗೌಡ ಪಾಟೀಲ್, ಹನುಮಂತ ಕರ್ನಕೋಟೆ, ಹುಸೇನ್‍ಸಾಬ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ನಾಗರಾಜ್ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...