Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಡಿಓಗಳ‌ ಹಕ್ಕೊತ್ತಾಯಗಳಿಗೆ ಸ್ಪಂದಿಸದಿದ್ದರೆ ಹೋರಾಟ : ರಮೇಶ್ ನಡಗೇರಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಟಾನಗೊಂಡು ಅಧಿಕಾರ ವಿಕೇಂದ್ರಿಕರಣವಾಗಬೇಕೆಂದರೆ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಓ.ಗಳಿಗೆ ಏಕಕಾಲಕ್ಕೆ ಬಿ ಗ್ರೇಡ್ ಹುದ್ದೆಗೆ ಬಡ್ತಿ ನೀಡುವಂತೆ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಬಿ ಗ್ರೇಡ್ ಹುದ್ದೆ ಉನ್ನತೀಕರಿಸಿದ ಸಂಘದ ರಾಜ್ಯಾಧ್ಯಕ್ಷ ರಮೇಶ್ ನಡಗೇರಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಲ್ಲಿ ಭಾನುವಾರ ಕರೆಯಲಾಗಿದ್ದ ರಾಜ್ಯ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮಾವೇಶಕ್ಕೆ ದಿನಾಂಕ ನಿಗಧಿಪಡಿಸಿಕೊಂಡು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಂಚಾಯತ್‍ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ ಖರ್ಗೆರವರನ್ನು ಆಹ್ವಾನಿಸಿ ಬಿ ಗ್ರೇಡ್ ಹುದ್ದೆಗೆ ಉನ್ನತಿಕರಿಸುವಂತೆ ಹಕ್ಕೊತ್ತಾಯ ಮಂಡಿಸಲಾಗುವುದು.

 

ಒಂದು ವೇಳೆ ಸರ್ಕಾರ ನಮ್ಮ ನ್ಯಾಯಯುತವಾದ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟದ ಹಾದಿ ಹಿಡಿಯುವ ಕುರಿತು ಸಭೆಯಲ್ಲಿ ಚರ್ಚಿಸಿದರು.
1500 ಪಿಡಿಓ.ಗಳಿಗೆ ಈಗಾಗಲೆ ಬಡ್ತಿ ನೀಡಲಾಗಿದೆ. ಉಳಿದ 4194 ಪಿಡಿಓ.ಗಳಿಗೆ ಬಿ ಗ್ರೇಡ್ ಹುದ್ದೆಗೆ ಬಡ್ತಿ ನೀಡಬೇಕು. ಆಗ ಮಾತ್ರ ಆಡಳಿತ ಸುಗಮವಾಗಿ ನಡೆಯಲು ಸಾಧ್ಯ. ಮೂರು ತಿಂಗಳಿಗೊಮ್ಮೆ ನಡೆಯುವ ಕೆಡಿಪಿ.ಸಭೆಗಳಿಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು.

 

ಸಿ.ವೃಂದದಲ್ಲಿದ್ದೇವೆಂದು ಕೆಲವು ಇಲಾಖೆಯ ಅಧಿಕಾರಿಗಳು ಸಭೆಗೆ ಪಾಲ್ಗೊಳ್ಳುವುದಿಲ್ಲ. ಸೇವೆಯ ಜೇಷ್ಠತೆ ಮೇಲೆ ಐದು ವರ್ಷಗಳಿಗೊಮ್ಮೆ ಪಿಡಿಓ.ಗಳಿಗೆ ಬಡ್ತಿ ನೀಡಬೇಕು. 2010, 13, 18 ರಲ್ಲಿ ಸೇವೆಗೆ ಸೇರ್ಪಡೆಯಾದ ಪಿಡಿಓ.ಗಳು ಇದುವರೆವಿಗೂ ಬಡ್ತಿಯಿಲ್ಲದೆ ವಂಚಿತರಾಗಿದ್ದಾರೆ. ಅಧಿಕಾರವಧಿ ಮೀರಿ ಕೆಲಸ ಮಾಡುತ್ತಿದ್ದೇವೆ. ಬಡ್ತಿ ಎನ್ನುವುದು ನಿಂತ ನೀರಾಗಿದೆ. ಕೆಲಸಕ್ಕೆ ತಕ್ಕಂತೆ ರಾಜ್ಯ ಸರ್ಕಾರ ಬಡ್ತಿ ನೀಡಬೇಕೆಂಬುದು ನಮ್ಮ ಆಗ್ರಹ. ಸರ್ಕಾರ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದಿದ್ದರೆ ಹೋರಾಟದ ಮೂಲಕ ನ್ಯಾಯ ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಎಲ್ಲಾ ಪಿಡಿಓ.ಗಳು ಬೆಂಬಲವಾಗಿ ನಿಲ್ಲಬೇಕೆಂದು ರಮೇಶ್ ನಡಗೇರಿ ಮನವಿ ಮಾಡಿದರು.

 

ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಬಿ ಗ್ರೇಡ್ ಹುದ್ದೆ ಉನ್ನತಿಕರಿಸಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ವಿಶ್ವನಾಥ್, ಖಜಾಂಚಿ ಹನುಮಂತ ಕರ್ನಕೋಟೆ, ಉಪಾಧ್ಯಕ್ಷರುಗಳಾದ ಜಯಗೌಡ ಪಾಟೀಲ್, ಶ್ರೀದೇವಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಾಜೇಶ್ವರಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಲತೇಶ ಮುದ್ದಜ್ಜಿ, ಪಿಡಿಓ. ಸಂಘದ ಜಿಲ್ಲಾಧ್ಯಕ್ಷ ನಾಗರಾಜ್ ಸೇರಿದಂತೆ ರಾಜ್ಯದ 31 ಜಿಲ್ಲೆಗಳ ಅಧ್ಯಕ್ಷರುಗಳು ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now