ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಪಾರ ಕ್ರೇಜ್ ಹೊಂದಿರುವ ನಾಯಕ.ಈಗ ಟಾಕ್ಸಿಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಟಾಕ್ಸಿಕ್’ ಚಿತ್ರವನ್ನು ಯಶ್ ಮತ್ತು ವೆಂಕಟ್ ಕೆ. ನಾರಾಯಣ್ ನಿರ್ಮಿಸುತ್ತಿದ್ದಾರೆ. ಇದು ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಟಾಕ್ಸಿಕ್ ಚಿತ್ರಕ್ಕಾಗಿ ಯಶ್ ಪಡೆದ ಸಂಭಾವನೆ ಎಷ್ಟು ಗೊತ್ತ ?
ವರದಿಗಳ ಪ್ರಕಾರ, ಯಶ್ ಈ ಚಿತ್ರಕ್ಕಾಗಿ ಸುಮಾರು 150 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಯಶ್ ಈ ಚಿತ್ರಕ್ಕೆ ಸಹ-ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಒಟ್ಟು ಗಳಿಕೆ ಇನ್ನೂ ಹೆಚ್ಚಿರಬಹುದು ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಅವರು 150 ಕೋಟಿ ರೂಪಾಯಿ ನಿಗದಿ ಮಾಡಿದ್ದು, ಆ ಸಂಭಾವನೆ ತೆಗೆದುಕೊಳ್ಳದೆ ಅದನ್ನು ಸಿನಿಮಾ ಮೇಲೆ ಹೂಡಿರಬಹುದು ಎಂದು ಹೇಳಲಾಗುತ್ತಾ ಇದೆ.
ಅದು ಕೂಡಾ ಕೋಟಿ ಕೋಟಿ ಮೊತ್ತಕ್ಕೆ ಟಾಕ್ಸಿಕ್ ಸಿನಿಮಾದ ಆಡಿಯೋ ರೈಟ್ಸ್ ಅನ್ನು ಜೀ ಮ್ಯೂಸಿಕ್ ಪಡೆದುಕೊಂಡಿದೆ. ಇತ್ತೀಚೆಗೆ ಚಿತ್ರದ ಟೀಸರ್ ರಿಲೀಸ್ ಆಗಿ ಹಿಟ್ ಆಗಿದೆ. 24 ಗಂಟೆಗಳಲ್ಲಿ ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಎಲ್ಲಾ ವೇದಿಕೆಗಳಲ್ಲಿ ಸೇರಿ 197 ಮಿಲಿಯನ್ಸ್ ವೀವ್ಸ್ ಪಡೆದುಕೊಂಡಿದೆ.




