Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುದಾಪುರದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಫೆ. 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ ಫೆ. 24 : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕುದಾಪುರದಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪೆ. 28 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.

ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ವೈಜ್ಞಾನಿಕ ಕುತೂಹಲ ಮತ್ತು ನಾವೀನ್ಯತೆಯನ್ನು ಉತ್ತೇಜಿಸುವ ಉದ್ದೇಶದಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ, ನೇರ ಪ್ರಯೋಗಗಳು, ಜನಪ್ರಿಯ ವಿಜ್ಞಾನ ಉಪನ್ಯಾಸಗಳು, ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನ, ಇದರ ಜೊತೆಗೆ ವಿಜ್ಞಾನದ ಪ್ರಾಯೋಗಿಕ ಮತ್ತು ನವೀನ ಅನ್ವಯಿಕೆಗಳನ್ನು ಪ್ರದರ್ಶಿಸುವ ಹಲವಾರು ವಿಜ್ಞಾನ ಪ್ರಯೋಗಗಳು ಮತ್ತು ಪ್ರದರ್ಶನಗಳನ್ನು ನಡೆಸಲಾಗುವುದು.
ವಿಜ್ಞಾನ ದಿನಾಚರಣೆಯ ಜೊತೆಗೆ, ಅದೇ ದಿನದಂದು ವಿದ್ಯಾರ್ಥಿಗಳಿಗೆ ಬೆ. 9 ರಿಂದ ಚಿತ್ರಕಲಾ ಸ್ಪರ್ಧೆ, ಶಿಕ್ಷಕರುಗಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ವಿಶೇಷ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಕಾರ್ಯಕ್ರಮದ ಕುರಿತ ಹೆಚ್ಚಿನ ಮಾಹಿತಿಗೆ ಡಾ. ರಾಘವೇಂದ್ರ ಆರ್.-9986904437, ಹೇಮಂತ್-6361772214 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಐಐಎಸ್‍ಸಿ ಸ್ಕಿಲ್ ಅಂಡ್ ಟ್ಯಾಲೆಂಟ್ ಡೆವಲಪ್‍ಮೆಂಟ್ ಸೆಂಟರ್‍ನ ಕನ್ವೀನರ್ ಡಾ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...