Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆ ಮಗುವಿನ ವಿಡಿಯೋ ಹಂಚಿಕೊಂಡವರ ವಿರುದ್ಧವೂ ಕೇಸ್..!

---Advertisement---

ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ಮತ್ತೆ ಮುನ್ನಲೆಗೆ ಬಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹೆಣ್ಣು ಮಗುವಿನ ಜೊತೆಗೆ ನಡೆದುಕೊಂಡ ರೀತಿಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಸಂಬಂಧ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಕೇಸ್ ಕೂಡ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಹಾಪುರದ ಮಹಲ್ ರೋಜಾ ಗ್ರಾಮದಲ್ಲಿ ದೂರು ದಾಖಲಾಗಿದೆ.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸೂಚನೆ ಬೆನ್ನಲ್ಲೇ ಈ ಪ್ರಕರಣ ದಾಖಲಾಗಿದೆ. ಶಹಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂರು ನೀಡಿದ್ದು, ಫೋಕ್ಸೋ ಹಾಗೂ ಬಿಎನ್ಎಫ್ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ‌. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಮಲ್ಲಿಕಾರ್ಜುನ ಮುತ್ಯ ಪರಾರಿಯಾಗಿದ್ದಾರೆ ಎನ್ನಲಾಗ್ತಾ ಇದೆ. ವಿಡಿಯೋವೊಂದು ವೈರಲ್ ಆಗಿದ್ದು, ಆ ವಿಡಿಯೋ ಆಧಾರದ ಮೇಲೆ ದೂರು ದಾಖಲಾಗಿದೆ. ಉತ್ತರ ಕರ್ನಾಟಕದ ಒಂದಷ್ಟು ಜನರು ಅಪ್ಪಾಜಿ ಎಂದೇ ಪ್ರೀತಿ ತೋರಿಸುತ್ತಾರೆ ಈ ಮುತ್ಯನಿಗೆ. ದೇವರ ಸ್ಥಾನವನ್ನೇ ಕೆಲವರು ನೀಡಿದ್ದಾರೆ.

ಈ ಪ್ರಕರಣವನ್ನ ಮಕ್ಕಳ ರಕ್ಷಣಾ ಆಯೋಗ ಗಂಭೀರವಾಗಿ ತೆಗೆದುಕೊಂಡಿದೆ. ಅಧ್ಯಕ್ಷರಾದ ಶಶಿಧರ್ ಕೋಸುಂಬೆ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಪ್ರಾಪ್ತ ಮಗುವಿನೊಂದಿಗೆ ನಡೆದುಕೊಂಡ ರೀತಿಯ ವಿಡಿಯೋ ವೈರಲ್ ಆಗ್ತಾ ಇದೆ. ಈ ಸಂಬಂಧ ಯಾದಗಿರಿ ಎಸ್ಪಿ ಅವರಿಗೆ ಪತ್ರದ ಮೂಲಕ ತಿಳಿಸಿದ್ದೇವೆ. ಕೂಡಲೇ ಪರಿಶೀಲನೆ ಮಾಡಿ ಎಂದಿದ್ದೇವೆ. ರಾತ್ರಿಯೇ ಈ ಸಂಬಂಧ ಎಫ್ಐಆರ್ ಆಗಿದೆ. ಯಾರ್ಯಾರು ಸೋಷಿಯಲ್ ಮೀಡಿಯಾದಲ್ಲಿ ಈ ಸಂಬಂಧ ವಿಡಿಯೋ ಪ್ರಕಟಿಸಿದ್ದಾರೆ ಅವರನ್ನು ಪತ್ತೆ ಹಚ್ಚಿ, ಫೋಕ್ಸೋ ಪ್ರಕರಣದಡಿ ಕೇಸ್ ದಾಖಲಿಸುವುದಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...