ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇಂದು (Feb 26) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಮತ್ತು ತೆಲುಗು ಸಂಪ್ರದಾಯದಂತೆ ಬೆಳಗ್ಗೆ 8 ಗಂಟೆಯ ಮುಹೂರ್ತದಲ್ಲಿ ಮದುವೆ ಅದ್ಧೂರಿಯಾಗಿ ನೆರವೇರಿದೆ.ರಾಜಸ್ಥಾನದ ಉದಯಪುರದ ಐಟಿಸಿ ಹೋಟೆಲ್ನಲ್ಲಿ ಸಮಾರಂಭ ನಡೆದಿದೆ.
ಪುರೋಹಿತರುಗಳು ತೆಲುಗು ಸಂಪ್ರದಾಯದಂತೆ ಈ ಜೋಡಿಯ ಮದುವೆ ಮಾಡಿಸಿದ್ದಾರೆ.ತೆಲಂಗಾಣದಿಂದ ವಿಶೇಷವಾಗಿ ಪುರೋಹಿತರ ತಂಡವೊಂದು ಉದಯಪುರಕ್ಕೆ ಆಗಮಿಸಿ, ಎಲ್ಲಾ ವಿಧಿ ವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿತು. ಇದೇ ದಿನ ಸಂಜೆ ವೇಳೆಗೆ ಕೊಡವ ಸಂಪ್ರದಾಯದಂತೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಮತ್ತೊಮ್ಮೆ ನಡೆಯಲಿದೆ. ಇಬ್ಬರೂ ಮದುವೆ ನಡೆದಿದೆಯಾದರೂ ಮದುವೆಯ ಅಧಿಕೃತ ಫೋಟೊವನ್ನು ಇನ್ನೂ ಈ ಜೋಡಿ ಹಂಚಿಕೊಂಡಿಲ್ಲ.
ಈ ಮದುವೆಯಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಅತ್ಯಾಪ್ತ ಗೆಳೆಯರು ಮಾತ್ರವೇ ಭಾಗವಹಿಸಿದ್ದಾರೆ. ಎರಡೂ ಕುಟುಂಬದವರು ಪರಸ್ಪರ ಗೇಮ್ಗಳನ್ನು ಆಡಿದ್ದಾರೆ. ಮೆಹಂದಿ, ಹಳದಿ, ಸಂಗೀತ್ ಕಾರ್ಯಕ್ರಮಗಳನ್ನು ಆಯೋಜಿಸಿ ಸಖತ್ ಎಂಜಾಯ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಅವರ ತಾಯಿ, ತಮ್ಮ ಕುಟುಂಬದಲ್ಲಿ ತಲೆ ತಲೆಮಾರುಗಳಿಂದಲೂ ಬಳುವಳಿಯಾಗಿ ಬಂದಿರುವ ಚಿನ್ನದ ಬಳೆಗಳನ್ನು ನೀಡಿದ್ದಾರೆ ಎಂದು ವರದಿಯಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















