Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ.ಸಿ.ಹನುಮಂತೆಗೌಡ ಜನ್ಮದಿನ : ವೃದ್ದರಿಗೆ ಬಟ್ಟೆ, ಹೊದಿಕೆ ನೀಡಿ ಸರಳ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 26 : ಬಿಜೆಪಿ. ಮುಖಂಡ ಹಾಗೂ ಮಧುಗಿರಿ ಜಿಲ್ಲೆ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಸಿ.ಹನುಮಂತೆಗೌಡ ತಮ್ಮ 35 ನೇ ಜನ್ಮದಿನವನ್ನು ಕಬೀರಾನಂದಾಶ್ರಮದಲ್ಲಿನ ವೃದ್ದರಿಗೆ ಬಟ್ಟೆ ಮತ್ತು ಹೊದಿಕೆಗಳನ್ನು ವಿತರಿಸುವ ಮೂಲಕ ಸರಳವಾಗಿ ಆಚರಿಸಿಕೊಂಡರು.

 

ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಬಿ.ಸಿ.ಹನುಮಂತೆಗೌಡ ವೃದ್ದಾಶ್ರಮದಲ್ಲಿನ ವೃದ್ದರಿಗೆ ಪಂಚೆ, ವೃದ್ದೆಯರಿಗೆ ಸೀರೆ ಮತ್ತು ಹೊದಿಕೆಗಳನ್ನು ವಿತರಿಸಿದರು.

ಸಹಜವಾಗಿ ಹುಟ್ಟುಹಬ್ಬವನ್ನು ಎಲ್ಲರೂ ವಿಜೃಂಭಣೆಯಿಂದ ಆಚರಿಸಿಕೊಳ್ಳುತ್ತಾರೆ. ವೃದ್ದಾಶ್ರಮದಲ್ಲಿರುವವರಿಗೆ ಹೊದಿಕೆ, ವಸ್ತ್ರಗಳನ್ನು ವಿತರಿಸಿ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡಿರುವುದು ನನಗೆ ತೃಪ್ತಿಯಾಗಿದೆ ಎಂದು ಹೇಳಿದರು.

 

ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳಿಗೂ ಹಣ್ಣುಗಳನ್ನು ವಿತರಿಸಿ ಶೀಘ್ರವೇ ಗುಣಮುಖರಾಗುವಂತೆ ಹಾರೈಸಿದರು.
ಬಿಜೆಪಿ.ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್, ವಕ್ತಾರ ನಾಗರಾಜ್‍ಬೇದ್ರೆ, ಗರುಢ ಕೇಸರಿಕುಮಾರ್, ವಸಂತಾಚಾರ್, ಕಿರಣ್, ತಿಪ್ಪೇಸ್ವಾಮಿ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now