Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯಸೂಚನೆ

---Advertisement---

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿದ್ದು,ಪರೀಕ್ಷಾ ಅಕ್ರಮಗಳನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಒಟ್ಟು 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಚಿತ್ರದುರ್ಗ : ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಜಿಲ್ಲೆಯಲ್ಲಿ 14,281 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಈ ಪೈಕಿ 12,371 ಹೊಸ ವಿದ್ಯಾರ್ಥಿಗಳು, 1,645 ಪುನರಾವರ್ತಿತ ಅಭ್ಯರ್ಥಿಗಳು, 173 ಖಾಸಗಿ ಅಭ್ಯರ್ಥಿಗಳು ಹಾಗೂ 5 ಮಂದಿ ಅಭ್ಯರ್ಥಿಗಳು ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ.

26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ :
ಚಿತ್ರದುರ್ಗ ತಾಲ್ಲೂಕಿನಲ್ಲಿ 10 ಪರೀಕ್ಷಾ ಕೇಂದ್ರಗಳು, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ತಾಲ್ಲೂಕಿನಲ್ಲಿ ತಲಾ 04 ಪರೀಕ್ಷಾ ಕೇಂದ್ರಗಳು ಹಾಗೂ ಮೊಳಕಾಲ್ಮುರು ಮತ್ತು ಹೊಳಲ್ಕೆರೆ ತಾಲ್ಲೂಕಿನಲ್ಲಿ ತಲಾ 02 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 26 ಪರೀಕ್ಷಾ ಕೇಂದ್ರಗಳಿಗೆ 141 ಕಾಲೇಜುಗಳು ಟ್ಯಾಗ್ ಆಗಿವೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದ್ದು, ಹತ್ತಿರದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.ವಿದ್ಯಾರ್ಥಿಗಳು ಮಾತ್ರವಲ್ಲದೆ, ಮೇಲ್ವಿಚಾರಕರು ಮತ್ತು ಸಿಬ್ಬಂದಿಗಳೂ ಸಹ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ.ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ GPS ಸಿಸ್ಟಮ್ ಅಳವಡಿಸಲಾಗಿದೆ.

ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಪ್ರವೇಶ ಪತ್ರ (Hall Ticket) ತೋರಿಸುವುದು ಕಡ್ಡಾಯ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಸಿಹಿ ಸುದ್ದಿ ನೀಡಿದೆ. ಫೆಬ್ರವರಿ 28 ರಿಂದ ಆರಂಭವಾಗಲಿರುವ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ಈ ಕ್ರಮ ಸಹಕಾರಿಯಾಗಲಿದೆ ಎಂದು ಸಾರಿಗೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪರೀಕ್ಷಾ ವೇಳಾಪಟ್ಟಿ ಮತ್ತು ಸಮಯ
ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10:00ರಿಂದ ಮಧ್ಯಾಹ್ನ 1:00ರವರೆಗೆ ನಡೆಯಲಿವೆ. ಪ್ರಮುಖ ದಿನಾಂಕಗಳು ಹೀಗಿವೆ:
ಫೆಬ್ರವರಿ 28: ಕನ್ನಡ, ಅರೇಬಿಕ್
ಮಾರ್ಚ್ 3: ಇಂಗ್ಲಿಷ್
ಮಾರ್ಚ್ 5: ಇತಿಹಾಸ
ಮಾರ್ಚ್ 6: ಭೌತಶಾಸ್ತ್ರ
ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ
ಮಾರ್ಚ್ 10: ಅರ್ಥಶಾಸ್ತ್ರ
ಮಾರ್ಚ್ 13: ರಾಜ್ಯಶಾಸ್ತ್ರ
ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...