ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ದಾಳಿ ನಡೆಸುತ್ತಿದ್ದು, ದುಬೈನ (Dubai International Airport) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದೆ. ದುಬೈನಲ್ಲಿರೋ ಕನ್ನಡಿಗರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಸೇರಿದಂತೆ 150ಕ್ಕೂ ಹೆಚ್ಚು ಕನ್ನಡಿಗರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಯುಎಇಯ ಅಬುಧಾಬಿಯಲ್ಲಿರುವ ಜಾಯೆದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅತ್ಯಂತ ಜನ ಪ್ರಯಾಣಿಸುವ ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ನಡೆಸಿದೆ. ಇರಾನ್ ಮೇಲೆ ಅಮೆರಿಕ ನಡೆಸಿದ ಕ್ಷಿಪಣಿ ದಾಳಿ ಮತ್ತು ನಂತರದ ದಿನಗಳಲ್ಲಿ ಈ ಪ್ರದೇಶದಲ್ಲಿನ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಪ್ರತಿದಾಳಿಗಳಿಂದಾಗಿ ಮಧ್ಯಪ್ರಾಚ್ಯದ ಒಳಗೆ ಮತ್ತು ಹೊರಗೆ ಹೋಗುವ ಅನೇಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಒಬ್ಬ ಏಷ್ಯಾದ ಪ್ರಜೆ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಮತ್ತು ದುಬೈ ವಿಮಾನ ನಿಲ್ದಾಣದಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ದುಬೈಗೆ ತೆರಳುವ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಲಕ್ಷಾಂತರ ಪ್ರಯಾಣಿಕರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಅದರಲ್ಲಿ ಕರ್ನಾಟಕ 150 ಮಂದಿ ಕೂಡ ದುಬೈನಲ್ಲೇ ಸಿಲುಕಿದ್ದಾರೆ ಎಂದು ವರದಿಯಾಗಿದೆ. ದುಬೈನಲ್ಲಿ ವಿದ್ಯಾರ್ಥಿಗಳು ಸೇರಿ 150 ಹೆಚ್ಚು ಕನ್ನಡಿಗರು ಸಿಲುಕಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಅವರೆಲ್ಲಾ ಸಂಪರ್ಕಿಸಿ ಸುರಕ್ಷಿತವಾಗಿ ಕರೆತರುವ ಪ್ರಯತ್ನ ಮುಂದುವರೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















