ಕೋಲ್ಕತ್ತಾ: ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ. ಈ ಹಿನ್ನೆಲೆ ಅವರಿಗೆ ಗೌರವ ಸೂಚಿಸುವ ಸಲುವಾಗಿ ಇಂದಿನಿಂದಲೇ ಗಣರಾಜ್ಯೋತ್ಸವ ಕೂಡ ಆಚರಣೆ ಮಾಡಲಾಗಿದೆ. ಈ ಬೆನ್ನಲ್ಲೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಈ ದಿನವನ್ನ ರಜೆ ಘೋಷಿಸಲು ಸಲಹೆ ನೀಡಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಕ್ಕೆ ಶುಭ ಹಾರೈಸಿದ್ದು, ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ದೇಶ ಕಂಡ ಅಪ್ರತಿಮ ವೀರ ಸುಭಾಷ್ ಚಂದ್ರ ಬೋಸ್ ಅವರು. ಹೀಗಾಗಿ ಅವರ ಜನ್ಮ ದಿನಾಚರಣೆಯನ್ನ ರಾಷ್ಟ್ರೀಯ ರಜೆ ದಿನವನ್ನಾಗಿಸಬೇಕೆಂದು ಟ್ವೀಟ್ ಮಾಡಿದ್ದಾರೆ.