Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಮಧು ಬಂಗಾರಪ್ಪ ಜನ್ಮ ದಿನಾಚರಣೆ : ವೃದ್ಧಾಶ್ರಮದಲ್ಲಿ ಹಣ್ಣು ಹಂಪಲು ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮಾ. 02 : ಜಿಲ್ಲಾ ಕಾಂಗ್ರೆಸ್ ಇತರೆ ಹಿಂದುಳಿದ ವರ್ಗಗಳ ವಿಭಾಗದಿಂದ  ಕರ್ನಾಟಕ ರಾಜ್ಯ ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷರು ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರ ಜನ್ಮ ದಿನಾಚರಣೆಯ ಅಂಗವಾಗಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಇತರ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎನ್.ಡಿ. ಕುಮಾರ್ ನೇತೃತ್ವದಲ್ಲಿ ಕಬೀರಾನಂದಶ್ರಮದ ವೃದ್ಧಾಶ್ರಮದಲ್ಲಿ ಹಣ್ಣು ಹಂಪಲು ಬ್ರೆಡ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎನ್.ಡಿ.ಕುಮಾರ್ ನಮ್ಮ ನಾಯಕರು ಜನ್ಮ ದಿನಾಚರಣೆಯನ್ನು ಆಡಂಬರವಿಲ್ಲದೆ ಅನಾಥ ಮಕ್ಕಳಿಗೆ, ವೃದ್ಧಾಶ್ರಮದಲ್ಲಿನ ವೃದ್ದರಿಗೆ ಹಾಗೂ ಬಡವ ಬಲ್ಲಿದರಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕು ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್‍ಪೀರ್ ಮಾತನಾಡಿ ಒಳ್ಳೆಯ ದಿನವನ್ನು ಮತ್ತಷ್ಟು ಒಳ್ಳೆಯದನ್ನು ಮಾಡಲು ದಾನ ಧರ್ಮ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಟಿಪ್ಪು ಕಾಸಿಂಆಲಿ. ರವಿಕುಮಾರ್ ನಗರಸಭೆ ನಾಮ ನಿರ್ದೇಶಕ ಸದಸ್ಯರಾದ ಶಬ್ಬೀರ್ ಸಂದೀಪ್ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...