ಚಿತ್ರದುರ್ಗ. ಮಾ.02: ಜಿಲ್ಲಾಸ್ಪತ್ರೆ ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ, ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಬುಧವಾರ ಉಚಿತವಾಗಿ ಮಕ್ಕಳ ಹೃದಯ ತಪಾಸಣೆ ನಡೆಸಲಾಗುವುದು.
ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:00 ಗಂಟೆÀವರೆಗೆ ಪ್ರಖ್ಯಾತ ಮಕ್ಕಳ ಹೃದಯ ತಜ್ಞ ಡಾ.ಅನಿಲ್ ಕುಮಾರ್ ಜಿ.ಎಸ್. ತಪಾಸಣೆ ನಡೆಸುವರು. ಮಕ್ಕಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವ ಸೋಂಕು ಹಾಗೂ ಚರ್ಮ ಮತ್ತು ತುಟಿಗಳು ನೀಲಿ ಬಣ್ಣಕ್ಕೆ ತಿರುಗುವುದು. ಉಸಿರಾಟದಲ್ಲಿ ತೊಂದರೆ ಅಥವಾ ಏದುಸಿರು ಬಿಡುವುದು. ಅನಿಯಮಿತ ಹೃದಯ ಬಡಿತ. ಮರುಕಳಿಸುವ ಕೆಮ್ಮುನಂತಹ ಲಕ್ಷಣ ಕಂಡುಬAದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಈ ಉಚಿತ ಸೇವೆಯ ಸದುಪಯೋಗ ಪಡಿಸಿಕೊಳ್ಳವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಎಸ್.ಪಿ. ರವೀಂದ್ರ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











