Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ:  ಆಡಳಿತ ಮಂಡಳಿ ನಿರ್ಣಯವೇನು ?

---Advertisement---

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.

ಋತುಸ್ರಾವ ಆಗುವ ವಯಸ್ಸಿನ ಮಹಿಳೆಯರಿಗೆ ಕೂಡ ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್‌ 2018ರ ಸೆಪ್ಟೆಂಬರ್‌ನಲ್ಲಿ ತೀರ್ಪು ನೀಡಿತ್ತು.ಈ ತೀರ್ಪಿಗೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳು ಪ್ರಸ್ತುತ ಸುಪ್ರೀಂ ಕೋರ್ಟ್‌ನ ಪರಿಗಣನೆಯಲ್ಲಿದ್ದು, ಮಾರ್ಚ್‌ 14ರ ಮೊದಲು ನಿಲುವು ತಿಳಿಸುವಂತೆ ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿಸಿದವರಿಗೆ ನ್ಯಾಯಾಲಯವು ಸೂಚಿಸಿತ್ತು.

10ರಿಂದ 50 ವರ್ಷದ ಒಳಗಿನ ಮಹಿಳೆಯರ ಪ್ರವೇಶ ನಿಷೇಧವನ್ನು ಮುಂದುವರಿಸಬೇಕು ಎಂದು ಸೋಮವಾರ ನಡೆದ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಮಂಡಳಿಯು ತನ್ನ ಈ ನಿಲುವನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಲಿದೆ’ ಎಂದು ಹೇಳಿದ್ದಾರೆ.ದೇವಾಲಯಗಳು, ಅದರ ನಂಬಿಕೆ ಹಾಗೂ ಪದ್ಧತಿಗಳನ್ನು ರಕ್ಷಿಸಲು ಮಂಡಳಿಯು ಬದ್ಧವಾಗಿದೆ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now